ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ

ಮೈಸೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಇಂದು ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ. ಹಾಗಾಗಿ ಮೈಸೂರಿನ ಪುರಭವನ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಕಾಂಗ್ರೆಸ್ ಮುಖಂಡ ಜೆ.ಜೆ ಆನಂದ್, ಸೇವಾದಳ ಕಾರ್ಯಧ್ಯಕ್ಷ ಮೋಹನ್, ರಮ್ಮನಹಳ್ಳಿ ಸುರೇಶ್ ಮತ್ತು ಅಂಬೇಡ್ಕರ್ ಯುವ ಸೇನೆ ಬ್ರಿಗೇಡ್ ಪದಾಧಿಕಾರಿಗಳು ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದರು.

ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ Read More

ನಮ್ಮ ಪರಂಪರೆ ಪಾರಂಪರಿಕ ಕಟ್ಟಡಗಳ ಉಳಿಸುವುದು ಯುವ ಪೀಳಿಗೆಯ ಕರ್ತವ್ಯ-ದೇವರಾಜು

ಮೈಸೂರು: ಸಾಂಸ್ಕೃತಿಕ ನಗರಿ ನಮ್ಮ ಮೈಸೂರಿನಲ್ಲಿ ಹಿರಿಯರು ಕಷ್ಟ ಪಟ್ಟು ನಿರ್ಮಾಣ ಮಾಡಿರುವ ಅನೇಕ ಪಾರಂಪರಿಕ ಕಟ್ಟಡಗಳಿದ್ದು ಅವುಗಳನ್ನು ಸಂರಕ್ಷಿಸುವ ಕರ್ತವ್ಯ ಸರ್ಕಾರದ ಜೊತೆಗೆ ಯುವ ಪೀಳಿಗೆಯ ಮೇಲಿದೆ ಎಂದು ಪರಂಪರೆ ಇಲಾಖೆಯ ಆಯುಕ್ತ ದೇವರಾಜು ಹೇಳಿದರು.

ಭಾನುವಾರ ನಗರದ ಪುರಭವನದ ಬಳಿ ಆಯೋಜಿಸಲಾಗಿದ್ದ ಪಾರಂಪರಿಕ ನಡಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಟಾಂಗ ಸವಾರಿ, ಬೈಕ್ ಸವಾರಿ ಹಾಗೂ ಪಾರಂಪರಿಕ ನಡಿಗೆಯಿಂದ ಪರಂಪರೆಯನ್ನು ಉಳಿಸಲಾಗುವುದಿಲ್ಲ. ಈ ನಡಿಗೆಗಳು ಹಾಗೂ ಸವಾರಿಗಳು ಯುವಜನರಲ್ಲಿ ಅರಿವನ್ನು ಮೂಡಿಸಲು ಆಯೋಜಿಸುವ ಒಂದು ಕಾರ್ಯಕ್ರಮ ಇದರಲ್ಲಿ ತಿಳಿದುಕೊಂಡಂತಹ ಅಂಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಪಾರಂಪರಿಕ ಕಟ್ಟಡಗಳು, ನಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಉಳಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಸಂರಕ್ಷಣೆ ಮಾಡಲಾಗಿಲ್ಲದ ಹಲವಾರು ಕಟ್ಟಡಗಲಿವೆ ಹಾಗೂ ವಾಸ್ತು ಶಿಲ್ಪಗಳಿವೆ. ಇದರ ಬಗ್ಗೆ ಎಷ್ಟೋ ಜನರಿಗೆ ಮಾಹಿತಿಯೇ ಇರುವುದಿಲ್ಲ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸಲು ಇಲಾಖೆಯ ವತಿಯಿಂದ ಹಲವಾರು ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಅದರಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ನಮ್ಮೊಂದಿಗೆ ಕೈ ಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ನಮ್ಮ ಮೈಸೂರು ಸಂಸ್ಥಾನದ ರಾಜರು ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಇದರ ಪ್ರತಿರೂಪವಾಗಿ ಇಂದು ಮೈಸೂರಿನಲ್ಲಿ ಹಲವಾರು ವಿಶಿಷ್ಟ ಮತ್ತು ಸುಂದರ ಕಟ್ಟಡಗಳಾದ ಜಗನ್ಮೋಹನ ಅರಮನೆ, ಮೈಸೂರು ಮೆಡಿಕಲ್ ಕಾಲೇಜು, ಕೆ ಆರ್ ಹಾಸ್ಪಿಟಲ್ ಸೇರಿದಂತೆ ಹಲವಾರು ಕಟ್ಟಡಗಳಿವೆ ಅವುಗಳನ್ನು ಉಳಿಸಿಕೊಂಡು ಹೋಗಬೇಕು ಇದರ ಬಗ್ಗೆ ಯುವ ಪೀಳಿಗೆಗಳಿಗೆ ಮಾಹಿತಿ ಕೊಡಬೇಕು. ಹಾಗೆ ಯುವ ಪೀಳಿಗೆಯು ಮಾಹಿತಿ ಪಡೆಯಲು ತಾವೇ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಸಂಗೀತ ವಿಶ್ವವಿದ್ಯಾನಿಲಯದ ಕುಲಪತಿ ನಾಗೇಶ್ ಬೆಟ್ಟಕೋಟೆ ಅವರು ಮಾತನಾಡಿ,
ನಮ್ಮಲ್ಲಿ ಕಲೆಗಳಿಗೆ, ಪಾರಂಪರಿಕ ಕಟ್ಟಡಕ್ಕೆ ಆದ್ಯತೆಯನ್ನು ತಂದುಕೊಟ್ಟದ್ದು ಮೈಸೂರಿನ ರಾಜ ಮನೆತನ, ಅಂತಹ ನಾಡಿನಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಪರಂಪರೆ ಎಂಬುದು ಅಳಿದು ಹೋಗಬಾರದು ಎಂದು ಆಶಿಸಿದರು.

ಪಾರಂಪರಿಕ ನಡಿಗೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸೇರಿದಂತೆ 350 ಕ್ಕೂ ಹೆಚ್ಚಿನ ಜನ ಭಾಗವಹಿಸಿದ್ದರು.

ಪಾರಂಪರಿಕ ನಡಿಗೆಯು
ರಂಗಾಚಾರ್ಲು ಪುರಭವನದಿಂದ ಪ್ರಾರಂಭವಾಗಿ ಪಾರಂಪರಿಕ ಕಟ್ಟಡಗಳ ಮುಂದೆ ಸಾಗುತು.

ಪುರಾತತ್ವ, ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ವತಿಯಿಂದ ಮೈಸೂರಿನಲ್ಲಿರುವ ಹಲವಾರು ಪಾರಂಪರಿಕ ಕಟ್ಟಡಗಳ ಬಗ್ಗೆ ಕುಳಿತಲ್ಲೇ ಮೊಬೈಲ್ ಮೂಲಕ ಮಾಹಿತಿ ತಿಳಿಯಲು ವಿ.ಆರ್ ಕಾರ್ಡ್ ಹೊರತರಲಾಗಿದ್ದು, ಕಾರ್ಡ್ ನ ಹಿಂಭಾಗದಲ್ಲಿರುವ ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಆಪ್ ಡೌನ್ಲೋಡ್ ಆಗುತ್ತದೆ. ಆಪ್ ನಲ್ಲಿರುವ ಕಣ್ಣಿನ ಸಿಂಬಲ್ ಅನ್ನು ಸ್ಕ್ಯಾನ್ ಮಾಡಿದಾಗ ಮೈಸೂರು ವಿಶ್ವ ವಿದ್ಯಾನಿಲಯ, ಅರಮನೆ ಸೇರಿದಂತೆ ಪಾರಂಪರಿಕ ಕಟ್ಟಡಗಳ ವೀಕ್ಷಣೆ ಜೊತೆಗೆ ಮಾಹಿತಿ ಪಡೆಯಬಹುದಾಗಿದೆ. ಕಾರ್ಡ್ ನ ಬೆಲೆ 10 ರೂ. ಆಗಿದ್ದು, ಪುರಾತತ್ವ ಇಲಾಖೆಯಲ್ಲಿ ಪಡೆಯಬಹುದಾಗಿದೆ.

ನಮ್ಮ ಪರಂಪರೆ ಪಾರಂಪರಿಕ ಕಟ್ಟಡಗಳ ಉಳಿಸುವುದು ಯುವ ಪೀಳಿಗೆಯ ಕರ್ತವ್ಯ-ದೇವರಾಜು Read More

ಮಕ್ಕಳಿಗೆ ಪಾರಂಪರಿಕ ವಿಚಾರ ಪರಿಚಯ ಮಾಡುವುದು ಎಲ್ಲರ ಹೊಣೆ-ದೇವರಾಜು

ಮೈಸೂರು: ಮೈಸೂರು ದಸರಾ ವಿಶ್ವಕ್ಕೆ ಒಂದು ಪರಂಪರೆಯನ್ನು ತೋರಿಸುತ್ತದೆ ಎಂದು ಪುರತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಆಯುಕ್ತ ದೇವರಾಜು ತಿಳಿಸಿದರು.

ರಂಗಚಾರ್ಲು ಪುರಭವನ ಆವರಣದಲ್ಲಿ‌ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಏರ್ಪಡಿಸಿದ್ದ ಪಾರಂಪರಿಕ ಜಾವಾ ಮೋಟಾರ್ ಬೈಕ್‌ ಸವಾರಿಗೆ ಚಾಲನೆ‌ ನೀಡಿ ಅವರು ಮಾತನಾಡಿದರು.

ಮೈಸೂರಿನಲ್ಲಿ ಪಾರಂಪರಿಕ, ಸಾಂಸ್ಕೃತಿಕವಾಗಿ ಸಾಕಷ್ಟು ವಿಚಾರಗಳಿವೆ. ಇಂದಿನ ಮಕ್ಕಳಿಗೆ ಪಾರಂಪರಿಕ ವಿಚಾರಗಳನ್ನು ಪರಿಚಯ ಮಾಡಬೇಕಾದುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು.

ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಬ್ರಾಂಡ್ ಮೈಸೂರು ಎನ್ನುವ ಹೆಸರಿನಲ್ಲಿ ವಸ್ತು ಪ್ರದರ್ಶನವನ್ನು ಉದ್ಘಾಟನೆ ಮಾಡಿದ್ದಾರೆ, ಮೈಸೂರು ಜಿಲ್ಲೆಯ ವಿಶೇಷ ಪಾರಂಪರಿಕ ಸ್ಮಾರಕಗಳು ಕಟ್ಟಡಗಳನ್ನು ಅಲ್ಲಿ ವೀಕ್ಷಿಸಬಹುದು ಜತೆಗೆ ದಿನಸಿ, ಮೈಸೂರ್ ಸ್ಯಾಂಡಲ್ ಸೋಪ್, ಮೈಸೂರ್ ಸಿಲ್ಕ್, ಚನ್ನಪಟ್ಟಣ ಗೊಂಬೆಗಳನ್ನೂ ಇಡಲಾಗಿದ್ದು. ನಮ್ಮ ಇಲಾಖೆಯ ಪರವಾಗಿ ಸುಮಾರು 13 ಮಳಿಗೆಗಳನ್ನು ತೆರೆಯಲಾಗಿದೆ ಎಂದು ಹೇಳಿದರು.

ನಮ್ಮ ಪುರಾತತ್ವ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಸಾಕಷ್ಟು ಚಟುವಟಿಕೆಗಳನ್ನು ಹಮ್ಮಿಕೊಂಡಿದೆ,.ಕರ್ನಾಟಕ ರಾಜ್ಯ ಕಲೆ ಸಂಸ್ಕೃತಿ ಇವುಗಳ ಸಮೀಕ್ಷೆ ಮಾಡುವುದರ ಜೊತೆ ಬೆಳೆಸುವುದಕ್ಕೆ ಪ್ರೋತ್ಸಾಹ ನೀಡುವುದಕ್ಕೆ ಸಾಕಷ್ಟು ವಿಭಿನ್ನ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ದೇವರಾಜು ತಿಳಿಸಿದರು .

ಪಾದೇಶಿಕ ಆಯುಕ್ತ ರಮೇಶ್ ಡಿ.ಎಸ್ ಅವರು ಮಾತನಾಡಿ ಪರಂಪರೆ ಎಂದರೆ ನಾವು ಬೆಳೆದು ಬಂದ ದಾರಿ, ವಿಶೇಷವಾಗಿ ಪಾರಂಪರಿಕ ಕಟ್ಟಡಗಳು ಸ್ಮಾರಕಗಳಿಗೆ ಸಂಬಂಧಿಸಿದಂತೆ ಇವು ಯಾವ ಕಾರಣಕ್ಕಾಗಿ ಯಾವ ಕಾಲದಲ್ಲಿ ಸ್ಥಾಪಿಸಲಾಯಿತು ಎಂದು‌ ತಿಳಿದುಕೊಳ್ಳಬೇಕು‌ ಎಂದು ಸಲಹೆ ನೀಡಿದರು.

ಜಾವಾ ಮೋಟಾರ್ ಬೈಕ್ ಸವಾರಿಯು ಪುರ ಭವನದಿಂದ ಹೊರಟು ದೊಡ್ಡ ಗಡಿಯಾರ ಚಾಮರಾಜ ಒಡೆಯರ್ ವೃತ್ತ ಕೆ ಆರ್ ಸರ್ಕಲ್ ಬನ್ಮಯ್ಯ ಕಾಲೇಜು ಕಾಡಾ ಕಛೇರಿ ಹಾರ್ಡಿಂಜ್ ಸರ್ಕಲ್ ಎಸ್ ಐ ಆರ್ ಡಿ ಲಲಿತಮಹಲ್ ಟೇರಿಷಿಯನ್‌ ಕಾಲೇಜು ಪಿ ಟಿ ಸರ್ಕಲ್ ವಸಂತ ಮಹಲ್ ಮತ್ತು ಪುರಾತತ್ವ ಇಲಾಖೆಯನ್ನು ತಲುಪಿತು.

ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯ ನಿರ್ದೇಶಕರಾದ ಅಮಿತ್ ಪಾಂಡೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಇತಿಹಾಸ ಅಧ್ಯಯನದ ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಸರ್ವಪಿಳ್ಳೆ ಅಯ್ಯಂಗರ್, ಮತ್ತು ‌ಹಿರಿಯರಾದ ಎಸ್‌.ಎಸ್ ರಂಗರಾಜು ಅವರು ಉಪಸ್ಥಿತರಿದ್ದರು.

ಮಕ್ಕಳಿಗೆ ಪಾರಂಪರಿಕ ವಿಚಾರ ಪರಿಚಯ ಮಾಡುವುದು ಎಲ್ಲರ ಹೊಣೆ-ದೇವರಾಜು Read More

ಮಾನಸಿಕ ಸಮಸ್ಯೆ ಮುಕ್ತಿಗೆ ಸಂಗೀತ ಒಳಿತು: ಡಾ .ರೇಖಾ ಅರುಣ್

ಮೈಸೂರು: ಮಾನಸಿಕ ಸಮಸ್ಯೆಗಳಿಂದ
ಮುಕ್ತವಾಗಬೇಕಿದ್ದರೆ ಸಾಹಿತ್ಯ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು ಡಾ. ರೇಖಾ ಅರುಣ್ ಸಲಹೆ ನೀಡಿದರು.

ಮೈಸೂರು ಪುರಭವನ ದಲ್ಲಿ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ರವರ 74 ನೇ ವರ್ಷದ ಜನ್ಮದಿನದ ಅಂಗವಾಗಿ ಶ್ರೀ ಗಣೇಶ ಮ್ಯೂಸಿಕಲ್ ಗ್ರೂಪ್ಸ್ ಎ ಕಾಂತರಾಜು ಅವರ ಸಾರಥ್ಯದಲ್ಲಿ ಹಮ್ಮಿಕೊಂಡಿದ್ದ ಡಾಕ್ಟರ್ ವಿಷ್ಣುವರ್ಧನ್ ಅಭಿನಯದ ಗೀತೆಗಳ ಕರೋಕೆ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಭಿಮಾನಿಗಳ ಅಚ್ಚುಮೆಚ್ಚಿನ ನಟ ಡಾ.ವಿಷ್ಣುವರ್ಧನ್,ಸದಾಕಾಲ ಸ್ಥಿತ ಪ್ರಜ್ಞೆ ಹೊಂದಿದ್ದ ಅವರು, ಸಮಾಜವನ್ನು ಆರೋಗ್ಯಕರ ಚಿಂತನೆಗೆ ಹಚ್ಚುವಂತಹ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ಬಗೆಗೆ ವಿಶೇಷ ಪ್ರೀತಿ ಹೊಂದಿದ್ದರು. ಕಳಂಕರಹಿತರಾಗಿ ಬಾಳಿದ ವಿಷ್ಣು ಅವರು ಯುವ ಸಮುದಾಯದ ಬಗ್ಗೆ ಹೆಚ್ಚು ಒಲವು ಬೆಳೆಸಿಕೊಂಡಿದ್ದರು ಎಂದು ತಿಳಿಸಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಮೇಲುಕೋಟೆ ವಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ ಅವರು,
ಕನ್ನಡ ನಾಡು–ನುಡಿ ಬಗೆಗೆ ಅಪಾರ ಕಳಕಳಿ ಹೊಂದಿದ್ದ ಡಾ. ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ ಎಂದು ಶ್ಲಾಘಿಸಿದರು.

ಯುವಜನರಲ್ಲಿ ಭಾಷಾಭಿಮಾನ ಮತ್ತು ದೇಶಾಭಿಮಾನ ಮೂಡಿಸುವಂತಹ ಸದಭಿರುಚಿ ಚಿತ್ರಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದ ಅವರ ಜೀವನ ಕಿರಿಯ ನಟರಿಗೆ ಮಾದರಿ ಎಂದು ಹೇಳಿದರು.

ಇದೇ ವೇಳೆ ಇಳೈ ಆಳ್ವಾರ್ ಸ್ವಾಮೀಜಿ,
ಡಾ. ರೇಖಾ ಅರುಣ್, ಹೃದಯ ತಜ್ಞ ಡಾ. ಮಂಜುನಾಥ್,ಮನೋಶಾಸ್ತ್ರಜ್ಞೆ ಡಾ|| ರೇಖಾ ಮನಃಶಾಂತಿ, ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ,ಶ್ರೀ ಗಣೇಶ ಮ್ಯೂಸಿಕಲ್ ಗ್ರೂಪ್ಸ್ ಸಂಸ್ಥಾಪಕರಾದ ಎ.ಕಾಂತರಾಜು,
ಗಾಯಕರಾದ ಬಿ ನವೀನ್ ಕುಮಾರ್,
ಜಯಲಕ್ಷ್ಮಿ ನಾಯ್ಡು, ಲಕ್ಷ್ಮಿ, ಗುರುರಾಜ್, ಮತ್ತಿತರರು ಹಾಜರಿದ್ದರು.

ಮಾನಸಿಕ ಸಮಸ್ಯೆ ಮುಕ್ತಿಗೆ ಸಂಗೀತ ಒಳಿತು: ಡಾ .ರೇಖಾ ಅರುಣ್ Read More