ಪಹಲ್ಗಾಮ್ ಪ್ರವಾಸಿಗರ ಬಲಿ ಪಡೆದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಮಂದಿ ಪ್ರವಾಸಿಗರನ್ನು ಬಲಿ ತೆಗೆದುಕೊಂಡಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂಬವರನ್ನು ಬಂಧಿಸಲಾಗಿದೆ.

ಇವರಿಬ್ಬರು ಪಹಲ್ಗಾಮ್ ನಿವಾಸಿಗಳಾಗಿದ್ದು, ನಿಷೇಧಿತ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಸಂಘಟನೆಗೆ ಸೇರಿದ ಮೂವರು ಉಗ್ರರಿಗೆ ಆಶ್ರಯ ನೀಡಿದ್ದರು.
ತನಿಖೆ ವೇಳೆ, ಬಂಧಿತರು ದಾಳಿಕೋರರ ಗುರುತುಗಳನ್ನು ಬಹಿರಂಗಪಡಿಸಿದ್ದು, ಉಗ್ರರು ಪಾಕಿಸ್ತಾನಿ ಪ್ರಜೆಗಳು ಎಂದು ದೃಢಪಟ್ಟಿದೆ.
ಆರೋಪಿಗಳ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.
ಏಪ್ರಿಲ್ 22 ರಂದು, ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರನ್ನು ಹತ್ಯೆಗೈದಿದ್ದರು.
ಪಹಲ್ಗಾಮ್ ಪ್ರವಾಸಿಗರ ಬಲಿ ಪಡೆದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್ Read More