ಇಬ್ಬರ ಬಂಧನ: ಗಾಂಜಾ* 7.30 ಲಕ್ಷ ಹಣ ವಶ

ಮೈಸೂರು: ಮೈಸೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು‌ ಬಂಧಿಸಿ 10 ತಲವಾರ್ ಗಳು,2 kg ಗಾಂಜಾ ಹಾಗೂ 7.30 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.
ಫಿರ್ದೋಶ್ ಹಾಗೂ ರೋಶನ್ ಬಂಧಿತ ಆರೋಪಿಗಳು.
ಖಚಿತ ಮಾಹಿತಿ ಆಧರಿಸಿ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಮನೆಗಳ ಮೇಲೆ ದಾಳಿ ನಡೆಸಿದಾಗ ಆರೋಪಿಗಳು ಮಾಲು ಸಮೇತ ಸಿಕ್ಕಿಬಿದ್ದಿದ್ದಾರೆ.
ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಡಿಸಿಪಿಗಳಾದ ಬಿಂದುಮಣಿ ಹಾಗೂ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ ಮಂಡಿ ಠಾಣಾ ಪೊಲೀಸರು ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಫಿರ್ದೋಶ್ ಹಾಗೂ ರೋಶನ್ ಬಂಧಿತರು. ಆರೋಪಿಗಳಿಗೆ ಇಷ್ಟು ದೊಡ್ಡ ಪ್ರಮಾಣದ ಗಾಂಜಾ ಬಂದಿದ್ದು ಹೇಗೆ ಇದರ ಹಿಂದಿರುವ ದೊಡ್ಡ ವ್ಯಕ್ತಿಗಳು ಯಾರು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಹತ್ತು ತಲ್ವಾರ್ ಗಳು ಸಹ ಸಿಕ್ಕಿದ್ದು ಮಾರಕಾಸ್ತ್ರಗಳನ್ನ ಸಂಗ್ರಹಿಸಿದ್ದ ಉದ್ದೇಶ ಏನು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮಂಡಿ ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.

ಇಬ್ಬರ ಬಂಧನ: ಗಾಂಜಾ* 7.30 ಲಕ್ಷ ಹಣ ವಶ Read More

ಬೇಹುಗಾರಿಕೆ:ಇಬ್ಬರು ವ್ಯಕ್ತಿಗಳನ್ನ ಬಂಧಿಸಿದ ಪಂಜಾಬ್ ಪೊಲೀಸರು

ಪಂಜಾಬ್: ನವದೆಹಲಿಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿ,ಬೇಹುಗಾರಿಕೆಯಲ್ಲಿ ಪಾಲ್ಗೊಂಡ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಮಲೇರ್ಕೋಟ್ಲಾ ಪೊಲೀಸರು ಬಂಧಿಸಿದ್ದಾರೆ.

ಈ‌ ವುಷಯವನ್ನು ಪಂಜಾಬ್ ಪೊಲೀಸ್ ಮಹಾನಿರ್ದೇಶಕರು ಗೌರವ್ ಯಾದವ್(ಡಿಜಿಪಿ) ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.

ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಮೇರೆಗೆ ಕಾರ್ಯನಿರ್ವಹಿಸುತ್ತಾ, ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ಸೋರಿಕೆ ಮಾಡಿದ್ದಕ್ಕಾಗಿ ಒಬ್ಬನನ್ನು ಬಂಧಿಸಲಾಗೆದೆ,ಈತನ ಬಂಧನದಿಂದ ಲಭ್ಯವಾದ ಮಾಹಿತಿಯ ಆಧಾರದಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ರಹಸ್ಯ ಮಾಹಿತಿಯನ್ನು ರವಾನಿಸಿ ಆನ್‌ಲೈನ್ ವಹಿವಾಟಿನ ಮೂಲಕ ಪಾವತಿಗಳನ್ನು ಪಡೆಯುತ್ತಿದ್ದರು ಎಂದು ಡಿಜಿಪಿ ಹೇಳಿದ್ದಾರೆ.

ಆರೋಪಿಗಳಿಬ್ಬರೂ ಹ್ಯಾಂಡ್ಲರ್ ಜೊತೆ ಆಗಾಗ್ಗೆ ಸಂಪರ್ಕದಲ್ಲಿದ್ದರು ಮತ್ತು ಅವರ ಸೂಚನೆಯಂತೆ ಇತರ ಸ್ಥಳೀಯ ಕಾರ್ಯಕರ್ತರಿಗೆ ಹಣ ರವಾನಿಸುವಲ್ಲಿ ಭಾಗಿಯಾಗಿದ್ದರು. ಬಂಧಿತರಿಂದ ಎರಡು ಮೊಬೈಲ್ ಫೋನ್‌‌ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೇಹುಗಾರಿಕೆ:ಇಬ್ಬರು ವ್ಯಕ್ತಿಗಳನ್ನ ಬಂಧಿಸಿದ ಪಂಜಾಬ್ ಪೊಲೀಸರು Read More