ಯುವತಿ ಜತೆಗಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಬೆದರಿಕೆ:ಎಫ್ಐಆರ್

ಮೈಸೂರು: ವಿವಾಹವಾಗುವುದಾಗಿ ನಂಬಿಸಿ ಯುವತಿ ಜತೆ ತೆಗೆಸಿಕೊಂಡಿದ್ದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕಿರುಕುಳ ನೀಡಿದ ಆರೋಪದ ಮೇಲೆ
ನಾಲ್ವರ ವಿರುದ್ಧ ದೂರು ದಾಖಲಾಗಿದೆ.

ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ತುಮಕೂರು ಮೂಲದ ಸದಾನಂದಗೌಡ, ಅವರ ಅಕ್ಕ ರಾಜಮ್ಮ, ಭಾವ ಹನುಮಂತಪ್ಪ ಹಾಗೂ ದಯಾನಂದ್ ಎಂಬುವರ ವಿರುದ್ದ ದೂರು ದಾಖಲಾಗಿದೆ.

ಕಳೆದ 9 ವರ್ಷಗಳ ಹಿಂದೆ ಯುವತಿಗೆ ಸದಾನಂದ್ ಎಂಬವರ ಪರಿಚಯವಾಗಿದೆ.ನಂತರ ಸ್ನೇಹ ಪ್ರೀತಿಗೆ ತಿರುಗಿದೆ.ಆತ ಮದುವೆ ಪ್ರಸ್ತಾಪ ಮಾಡಿದ್ದಾನೆ.

ಈ ನಡುವೆ ಬೈಕ್ ಕೊಡಿಸುವ ನೆಪದಲ್ಲಿ ಸದಾನಂದ್ ಯುವತಿಯಿಂದ ಚೆಕ್‌ಗಳನ್ನ ಪಡೆದಿದ್ದಾನೆ. ಆಕೆ ಬೈಕ್ ಹಣ ಹಿಂದಿರುಗಿಸಿದರೂ ಚೆಕ್‌ಗಳನ್ನ ಹಿಂದಿರುಗಿಸಿಲ್ಲ. ನಂತರ ಮದುವೆ ಆಗುವುದಾಗಿ ನಂಬಿಸಿದ್ದಾನೆ. ಇಬ್ಬರೂ ಹಲವಾರು ಸ್ಥಳಗಳಲ್ಲಿ ಫೋಟೋಗಳನ್ನ ತೆಗೆಸಿಕೊಂಡಿದ್ದಾರೆ. ಎರಡು ವರ್ಷಗಳ ನಂತರ ಜಾತಿ ನೆಪ ಒಡ್ಡಿ ಮದುವೆ ಆತ ನಿರಾಕರಿಸಿದ್ದಾನೆ.

ಇದರಿಂದಾಗಿ ಯುವತಿ ಅಂತರ ಕಾಯ್ದುಕೊಂಡಿದ್ದಾಳೆ. ಕೆಲಕಾಲ ಸುಮ್ಮನಿದ್ದ ಸದಾನಂದ್ ಮತ್ತೆ ಸಂಪರ್ಕಕ್ಕೆ ಬಂದು ಮನೆಯಿಂದ ಆಕೆ ನೀಡಿದ್ದ ಚೆಕ್‌ಗಳನ್ನು ಸ್ನೇಹಿತನ ಹೆಸರಲ್ಲಿ 8.50 ಲಕ್ಷ ರೂ. ಹಣ ಬರೆದು ಬ್ಯಾಂಕ್‌ ಗೆ ನೀಡುವ ಮೂಲಕ ಚೆಕ್ ಬೌನ್ಸ್ ಮಾಡಿಸಿದ್ದಾನೆ.ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ.

ನಂತರ‌ ಆತ ಮನೆಗೆ ಬಂದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದನೆಂದು ನೊಂದ ಯುವತಿ ಆರೋಪಿಸಿದ್ದಾರೆ.

ಬೇರೊಬ್ಬನ ಜೊತೆ ವಿವಾಹ ನಿಶ್ಚಯವಾದಾಗ ಹುಡುಗನ ಮನೆಯವರಿಗೆ ಫೋಟೋಗಳನ್ನ ತೋರಿಸಿ ಮದುವೆ ನಿಲ್ಲಿಸಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನ ಹರಿದುಬಿಡುವುದಾಗಿ ಬೆದರಿಕೆ ಹಾಕಿದ್ದಾನೆ.

ಹಾಗಾಗಿ ಸದಾನಂದಗೌಡ ಹಾಗೂ ಈತನಿಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ದ ನೊಂದ ಯುವತಿ ದೂರು ದಾಖಲಿಸಿದ್ದಾರೆ.

ಯುವತಿ ಜತೆಗಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಬೆದರಿಕೆ:ಎಫ್ಐಆರ್ Read More

ಹೋರಾಟ ಹತ್ತಿಕ್ಕಲು ಮೈಸೂರಿನಲ್ಲಿ ನಿಷೇದಾಜ್ಞೆ:ನಾವು ಹೆದರಲ್ಲ-ಅಶೋಕ್

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ಖಂಡಿಸಿ ನಾವು ನಡೆಸಲು ಮುಂದಾಗಿದ್ದ ನಮ್ಮ ಹೋರಾಟವನ್ನು ಹತ್ತಿಕ್ಕಲು ಮೈಸೂರಿನಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ ನಾವು ಯಾವುದಕ್ಕೂ ಹೆದರಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಮೈಸೂರಿನಲ್ಲಿ ಇಂದಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,
ಮುಸ್ಲಿಮರ ಓಲೈಕೆಯಷ್ಟೆ ಕಾಂಗ್ರೆಸ್ ಉದ್ದೇಶ. ನಮಗೆ ಮತ ಹಾಕಿ ನೀವು ಏನು ಬೇಕಾದರೂ ಮಾಡಿ. ಇದು ಕಾಂಗ್ರೆಸ್ ಸರ್ಕಾರದ ಸ್ಲೋಗನ್. ಮುಸ್ಲಿಂ ಮತಕ್ಕಾಗಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರ ಬಂದಾಗ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ. ಈ ಸರ್ಕಾರ ಕಿತ್ತು ಒಗೆಯುವುದೇ ನಮ್ಮ ಉದ್ದೇಶ ಎಂದು ಅಶೋಕ್ ಹೇಳಿದರು.

ಹೋರಾಟ ಹತ್ತಿಕ್ಕಲು ಮೈಸೂರಿನಲ್ಲಿ ನಿಷೇದಾಜ್ಞೆ:ನಾವು ಹೆದರಲ್ಲ-ಅಶೋಕ್ Read More

ಉದಯಗಿರಿ ಠಾಣೆ ದಾಳಿ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸಿಪಿ ದಿಢೀರ್ ವರ್ಗಾವಣೆ!

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಯನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು ಚರ್ಚೆಗೆ ಗ್ರಾಸ ಒದಗಿಸಿದೆ‌

ಸೋಮವಾರ ರಾತ್ರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲುತೂರಾಟ ಪ್ರಕರಣದ ತನಿಖಾಧಿಕಾರಿಯಾಗಿದ್ದ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ,ಆದರೆ ಈತನಕ‌ ಅವರಿಗೆ ಬೇರೆ ಸ್ಥಳ ತೋರಿಸಿಲ್ಲ.

ಸಂದೇಶ್ ಕುಮಾರ್ ಅವರ ಜಾಗಕ್ಕೆ( ಸಿಸಿಬಿ ಎಸಿಪಿಯಾಗಿ) ಸಿಐಡಿಯಲ್ಲಿದ್ದ ಮೊಹಮ್ಮದ್ ಶರೀಫ್ ರಾವುತರ್ ಅವರನ್ನು ನೇಮಿಸಲಾಗಿದೆ.

ಮೈಸೂರಿನಲ್ಲಿ ನಡೆದ ಉದಯಗಿರಿ ಠಾಣೆ ಮೇಲಿನ ಕಲ್ಲುತೂರಾಟ ಪ್ರಕರಣದಲ್ಲಿ ಪೊಲೀಸರು ಸಹ ಗಾಯಗೊಂಡಿದ್ದರು. ಈ ಪ್ರಕರಣದ ತನಿಖೆಯನ್ನು ಎಸಿಪಿ ಸಂದೇಶ್ ಕುಮಾರ್ ಅವರು ಕೈಗೊಂಡು ಈವರೆಗೂ ಹಲವರನ್ನು ಬಂಧಿಸಿದ್ದರು.

ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಸಂದೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಶಾಂತಮಲ್ಲಪ್ಪ ವರ್ಗಾವಣೆ: ಮೈಸೂರಿನ ದೇವರಾಜ ಉಪವಿಭಾಗದ ಎಸಿಪಿ ಯಾಗಿದ್ದ ಶಾಂತಮಲ್ಲಪ್ಪ ಅವರನ್ನು ಕೂಡಾ ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ ರಾಜೇಂದ್ರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಉದಯಗಿರಿ ಠಾಣೆ ದಾಳಿ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸಿಪಿ ದಿಢೀರ್ ವರ್ಗಾವಣೆ! Read More

ಉದಯಗಿರಿ ಪೊಲೀಸ್ ಠಾಣೆ ಕಲ್ಲು ತೂರಾಟ ಪ್ರಕರಣ:‌ಒಟ್ಟು‌ 20 ಮಂದಿ ಅರೆಸ್ಟ್

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲುತೂರಾಟ ಪ್ರಕರಣ ಸಂಬಂಧ ಈವರೆಗೂ ಒಟ್ಟು 20 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲುತೂರಾಟ ಪ್ರಕರಣ ಸಂಬಂಧ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿತಗತು, ನಿನ್ನೆ ಸಂಜೆ ಮತ್ತೆ ಇನ್ನು ಎಂಟು ಮಂದಿ ಹಾಗೂ ಇಂದು 4 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಭಾಗಿಯಾಗಿದ್ದು ಅವರುಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಉದಯಗಿರಿ ಪೊಲೀಸ್ ಠಾಣೆ ಕಲ್ಲು ತೂರಾಟ ಪ್ರಕರಣ:‌ಒಟ್ಟು‌ 20 ಮಂದಿ ಅರೆಸ್ಟ್ Read More

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ:8 ಮಂದಿ ಅರೆಸ್ಟ್

ಮೈಸೂರು: ಅವಹೇಳನಕಾರಿ ಪೋಸ್ಟರ್ ವೈರಲ್ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.

ಮೈಸೂರಿನ ಶಾಂತಿನಗರದ ಸುಹೇಲ್, ರೆಹಲ್ ಪಾಷ, ಅಯಾನ್, ಗೌಸಿಯಾ ನಗರದ ಸೈಯದ್ ಸಾಧಿಕ್, ಸತ್ಯಾನಗರದ ಏಜಾಜ್, ರಾಜೀವ್ ನಗರದ ಸಾಧಿಕ್ ಪಾಷ, ಅರ್ಬಾನ್ ಷರೀಫ್ ಹಾಗೂ ಸೋಹೆಬ್ ಪಾಷ ಬಂಧಿತ ಆರೋಪಿಗಳು.

ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಪೊಲೀಸರು 50ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಗುರುತಿಸಿದ್ದು,
8 ಮಂದಿಯನ್ನು ಬಂಧಿಸಿದ್ದಾರೆ, ತಲೆಮರೆಸಿಕೊಂಡಿರುವ ಇತರೆ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸೋಮವಾರ ರಾತ್ರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಕಾರಣ ಎಂದು ಹೇಳಲಾಗುತ್ತಿರುವ ಮೌಲ್ವಿ ತಲೆಮರಿಸಿಕೊಂಡಿದ್ದು ಆತನ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಪ್ರಚೋದನಕಾರಿ ಭಾಷಣ ಮಾಡಿರುವ ಮೌಲ್ವಿ ಕೇರಳ, ರಾಮನಗರ ಕಡೆ ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ:8 ಮಂದಿ ಅರೆಸ್ಟ್ Read More