ಬೆಂಗಳೂರಿನಲ್ಲಿವಂದೇ ಭಾರತ್ ರೈಲಿಗೆ ಮೋದಿ ಚಾಲನೆ

ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.

ಇದು ಕರ್ನಾಟಕದಲ್ಲಿ ಸಂಚಾರ ಮಾಡುವ 11ನೇ ವಂದೇ ಭಾರತ್ ರೈಲು.

ಪ್ರಧಾನಿ ಮೋದಿ ಬೆಂಗಳೂರಿಂದ ಬೆಳಗಾವಿಗೆ ಚಲಿಸುವ ವಂದೇ ಭಾರತ್ ನೂತನ ರೈಲಿಗೆ ಚಾಲನೆ ನೀಡಿದ್ದಾರೆ. ಮೇಖ್ರಿ ಸರ್ಕಲ್, ಮೂಲಕ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತಲುಪಿದ ಮೋದಿ ಅವರು ರೈಲಿಗೆ ಹಸಿರು ನಿಶಾನೆ ತೋರಿಸಿದರು.

ಈ ರೈಲು ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು ಮಧ್ಯಾಹ್ನ 1.50ಕ್ಕೆ ಬೆಂಗಳೂರು ತಲುಪುತ್ತದೆ. ಮಧ್ಯಾಹ್ನ 2.20ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ. ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ನಡುವೆ ಸಂಪರ್ಕ ಕಲ್ಪಿಸಲಿದೆ.

ನಂತರ ಮೋದಿ ಅವರು ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮಾಡಿದರು.ಮೆಟ್ರೋದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರರೊಂದಿಗೆ ಪ್ರಯಾಣಿಸಿ ಖುಷಿ ಪಟ್ಟರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮೋದಿ ಸ್ವಾರಸ್ಯಕರ ಮಾತುಕತೆ ನಡೆಸಿದರು.

ಇದೇ ವೇಳೆ‌ ನಮ್ಮ ಮೆಟ್ರೋ ಮೂರನೇ ಫೇಸ್‌ಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಭಾಷಣ ಆರಂಭಿಸಿದ ನರೇಂದ್ರ ಮೋದಿ, ಬೆಂಗಳೂರನ್ನು ಹಾಡಿ ಹೊಗಳಿದರು.

ಜೂನ್ 14, 2016ರಂದು ಮೋದಿ ಅವರು ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಶಂಕುಸ್ಥಾಪನೆ ಮಾಡಿದ್ದರು,ಇದೀಗ ಮೋದಿ ಅವರೇ ಇದನ್ನು ಉದ್ಘಾಟನೆ ಮಾಡಿರುವುದು‌ ವಿಶೇಷ.

ಪ್ರಧಾನಿ ಮೋದಿ ಅವರನ್ನು ನೋಡಲು ಬೆಂಗಳೂರಿನ ರಸ್ತೆಯ ಎರಡೂ ಬದಿ ಜನಸಾಗರವೇ ಹರಿದು ಬಂದಿತ್ತು.
ಮೋದಿ ಅವರಿಗೆ ಜಯಘೋಷ ಕೂಗುತ್ತಿದ್ದರು.

ಬೆಂಗಳೂರಿನಲ್ಲಿವಂದೇ ಭಾರತ್ ರೈಲಿಗೆ ಮೋದಿ ಚಾಲನೆ Read More