ಸಾವರ್ಕರ್ ಜಯಂತಿ:ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಮೈಸೂರು: ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ವತಿಯಿಂದ ಸ್ವಾತಂತ್ರ್ಯ ವೀರ ಸಾವರ್ಕರ್ ಜಯಂತಿ ಅಂಗವಾಗಿ ಮೇ.29 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.
ಶಿಬಿರವು ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ನಾಳೆ ಬೆಳಗ್ಗೆ 11 ರಿಂದ ಮಧ್ಯಾಹ್ನ 2ರವರೆಗೆ ಇರಲಿದೆ, ದಯಮಾಡಿ ದೇಶಪ್ರೇಮಿಗಳು ಹಾಗೂ ವೀರ ಸಾವರ್ಕರ್ ಅಭಿಮಾನಿಗಳು ಶಿಬಿರಕ್ಕೆ ಆಗಮಿಸಿ ಸ್ವಯಂ ಪ್ರೇರಿತ ರಕ್ತದಾನದಲ್ಲಿ ಭಾಗಿಯಾಗಬೇಕೆಂದು ಪ್ರಜ್ಞಾವಂತ ನಾಗರಿಕ ವೇದಿಕೆ ಸಂಚಾಲಕ ಸುಚಿಂದ್ರ ಮನವಿ ಮಾಡಿದ್ದಾರೆ.
ಶಿಬಿರದ ಮುಖ್ಯ ಅತಿಥಿಗಳಾಗಿ
ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್ ಆರ್ ಮಹಾದೇವಸ್ವಾಮಿ, ಬಿಜೆಪಿ ಮುಖಂಡರಾದ ಆರ್ ರಘು ಕೌಟಿಲ್ಯ,ಮಾಜಿ ಮಹಾಪೌರರಾದ ಸಂದೇಶ ಸ್ವಾಮಿ, ಬಿಜೆಪಿ ನಗರ ಉಪಾಧ್ಯಕ್ಷೆ ಹೇಮಾನಂದೀಶ್, ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷರಾದ ರಾಕೇಶ್ ಭಟ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸುಚೀಂದ್ರ ತಿಳಿಸಿದ್ದಾರೆ.