ಕೆಂಪೇಗೌಡರು ದಕ್ಷ,ದೂರದೃಷ್ಟಿಯಿದ್ದ ಆಡಳಿತಗಾರರು- ಸಿದ್ದರಾಮಯ್ಯ

ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ, ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸಿಎಂ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚಿಸಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದ್ದೇವೆ ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದು ತಿಳಿಸಿದರು.

ಕೆಂಪೇಗೌಡರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ನಿರ್ಮಿಸಿದ್ದರು ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಲಿಗಳ ಸಾವು: ತನಿಖಾ ವರದಿಯ ನಂತರ ಕ್ರಮ
ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ‌ ವೇಳೆ ಸಿದ್ದರಾಮಯ್ಯ ತಿಳಿಸಿದರು.

.

ಕೆಂಪೇಗೌಡರು ದಕ್ಷ,ದೂರದೃಷ್ಟಿಯಿದ್ದ ಆಡಳಿತಗಾರರು- ಸಿದ್ದರಾಮಯ್ಯ Read More

36 ಎಡಿಎಲ್ಆರ್ ಗಳ ಶೀಘ್ರ ನೇಮಕ:ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಪರವಾನಗಿ ಭೂಮಾಪಕರ ಕಾಯಂ ಮಾಡಲು ಕ್ರಮ‌ ಕೈಗೊಳ್ಳಲಾಗುವುದು ಜತೆಗೆ 36 ಎಡಿಎಲ್ಆರ್ ಗಳನ್ನು ನೇಮಕ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆ ಉದ್ಘಾಟಿಸಿ ಸಿದ್ದು ಮಾತನಾಡಿದರು.

ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ,ಪೋಡಿಮುಕ್ತ ಗ್ರಾಮಗಳಾಗಬೇಕು, ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ,ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು,ಇವೆರಡೂ ಅವರಲ್ಲಿದೆ ಎಂದು ಸಿಎಂ ಶ್ಲಾಘಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆ ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದು ತಿಳಿಸಿದರು.

ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ ಅಗತ್ಯ ಸಿಬ್ಬಂದಿ ಬಲ ಕೊಡಲಾಗಿದೆ,ಅಗತ್ಯ ಇದ್ದರೆ ಮತ್ತೂ ಕೊಡುತ್ತೇವೆ ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ,ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ ಎಂದು ಹೇಳಿದರು.

ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಪ್ರಕಟಿಸಿದರು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ,ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.

ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತೀ ವರ್ಷ ಆಚರಿಸಬೇಕು ಎಂದು ಸೂಚಿಸಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದರು. ಸಚಿವರಾದ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

36 ಎಡಿಎಲ್ಆರ್ ಗಳ ಶೀಘ್ರ ನೇಮಕ:ಸಿದ್ದರಾಮಯ್ಯ ಘೋಷಣೆ Read More

ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ನಾಯಕರು

ಬೆಂಗಳೂರು: ಬೆಂಗಳೂರಿನಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಮತ್ತಿತರರು ಭೇಟಿ ಮಾಡಿದರು.

ಇಂದು ವಿಧಾನಸೌಧದ ಆವರಣದಲ್ಲಿ ಕಾರ್ಯನಿಮಿತ್ತ ವಿಧಾನಸೌಧದ ತಮ್ಮ ಕಚೇರಿಗೆ ಸಾರ್ವಜನಿಕರ ಕುಂದು ಕೊರತೆ ಮತ್ತು ಹಾವಲು ಸ್ವೀಕರಿಸಲು ಆಗಮಿಸಿದ ರಹೀಮ್ ಖಾನ್ ಅವರನ್ನು ನಜರ್ ಬಾದ್ ನಟರಾಜ್ ಮತ್ತು ನಗರ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ರಾಮಪ್ಪ ರಮೇಶ್ ಭೇಟಿ ಮಾಡಿ ಕುಶಲೊಪರಿ ವಿಚಾರಿಸಿ ಶುಭ ಕೋರಿದರು.

ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ನಾಯಕರು Read More

ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ:ಸಿದ್ದರಾಮಯ್ಯ ಕರೆ

ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ,ಆದ್ದರಿಂದ ಎಲ್ಲರೂ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಣ್ಣ

ವಿಧಾನ ಸೌಧದಲ್ಲಿ ಆಯೋಜಿಸಿದ್ದ ಪುಸ್ತಕ ಮೇಳ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ
ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಕ್ಕಳು ಮೊಬೈಲ್ ಮತ್ತು ಇಂಟರ್ನೆಟ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು,
ಸಮಯ ಸಿಕ್ಕಾಗಲೆಲ್ಲಾ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ಆಯೋಜಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು

ಕಾರ್ಯಕ್ರಮದಲ್ಲಿ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್,ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್,ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಚಿವರು,ಶಾಸಕರು ಅಧಿಕಾರಿಗಳು ಪಾಲ್ಗೊಂಡಿದ್ದರು.

ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ:ಸಿದ್ದರಾಮಯ್ಯ ಕರೆ Read More

ಡಿಕೆಶಿ ಭೇಟಿ ಮಾಡಿದ ಮೈಸೂರಿನ ಮುಖಂಡರು.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಮೈಸೂರಿನ ಕೆಕ ಮುಖಂಡರು ಭೇಟಿ ಮಾಡಿದರು.

ಕಾರ್ಯನಿಮಿತ್ತ ಬೆಂಗಳೂರಿನ ವಿಧಾನಸೌಧದ ವಿಧಾನಸೌಧಕ್ಕೆ ಆಗಮಿಸಿದ ಡಿ.ಕೆ ಶಿವಕುಮಾರ್ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಭೇಟಿ ಮಾಡಿ ಕುಶಲೊಪರಿ ವಿಚಾರಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ , ಕಾಂಗ್ರೆಸ್ ಮುಖಂಡ ಪಾಂಡುಪುರ ದಿನೇಶ್,ಕಡಕೋಳ ಶಿವಲಿಂಗ, ಮರಟಿ ಕ್ಯಾತನಹಳ್ಳಿ ಮಂಜುನಾಥ್, ಬೋಗಾದಿ ಚಂದ್ರು, ಇಂಜಿನಿಯರ್ ಚಂದ್ರಶೇಖರ್ ಹಾಗೂ ಜಗದೀಶ್ ಹಾಜರಿದ್ದರು.

ಡಿಕೆಶಿ ಭೇಟಿ ಮಾಡಿದ ಮೈಸೂರಿನ ಮುಖಂಡರು. Read More

ಗಾಂಧಿ ವಿಚಾರಧಾರೆಗಳು,ಮೌಲ್ಯಗಳು ಜಗತ್ತಿಗೇ ಪ್ರಸ್ತುತ- ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗಾಂಧೀಜಿಯವರ ವಿಚಾರಧಾರೆಗಳು, ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ ಎಂದು ಹೇಳಿದರು.

ಹುತಾತ್ಮರ ದಿನಾಚರಣೆ ಅಂಗವಾಗಿ ವಿಧಾನಸೌಧದ ಮಹಾತ್ಮಾ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ನಂತರ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು.

ಜನವರಿ 30, 1948 ರಂದು ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು.

ಅವರ ಹೋರಾಟದ ಬದುಕು, ಅಹಿಂಸೆ, ಸತ್ಯಾಗ್ರಹ, ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗೃಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಅವರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತು, ಬ್ರಿಟಿಷರ ದಾಸ್ಯದಿಂದ ಬಿಡುಗಡೆ ದೊರೆಯಿತು ಎಂದು ವಿವರಿಸಿದರು.

ಮಹಾತ್ಮಾ ಗಾಂಧಿ ಅವರು ಒಮ್ಮೆ ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 25,26,27 ರಂದು 1924 ನಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಿತು.ಅದರ ಸವಿನೆನಪಿಗಾಗಿ ಬೆಳಗಾವಿಯಲ್ಲಿ ಶತಮಾನೋತ್ಸವವನ್ನು ಆಚರಿಸಲಾಯಿತು ಎಂದು ‌ಹೇಳಿದರು.

ಮಹಾತ್ಮಾ ಗಾಂಧೀಜಿಯವರು ಕೇವಲ ಸ್ವಾತಂತ್ರ್ಯ ಹೋರಾಟ ಮಾಡಲಿಲ್ಲ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆತ ಮೇಲೆ ಹೇಗಿರಬೇಕೆಂದು ಪರಿಹಾರಗಳನ್ನು ನೀಡಿದ್ದರು. ಭಾರತ ಗ್ರಾಮಗಳ ದೇಶ. ಗ್ರಾಮಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದ್ದರು. ಅದಕ್ಕಾಗಿಯೇ ಗ್ರಾಮ ಸ್ವರಾಜ್ಯ ಎಂಬ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು ಎಂದು ಸಿಎಂ ಸ್ಮರಿಸಿದರು.

ಗಾಂಧೀಜಿಯವರ ಭಾರತ ಕಟ್ಟುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು ಅವರ ಮೌಲ್ಯಗಳನ್ನು ರೂಢಿಸಿಕೊಂಡು ಅದರಂತೆ ನಡೆಯುವ ಪ್ರಯತ್ನ ಮಾಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳನ್ನು ತರಲು ಏರ್ ಆಂಬ್ಯುಲೆನ್ಸ್:
ಪ್ರಯಾಗ್ ರಾಜ್ ನಲ್ಲಿ ನಡೆದ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತ ಪಟ್ಟಿದ್ದು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಏರ್ ಆಂಬ್ಯುಲೆನ್ಸ್ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಇದೇ ವೇಳೆ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ಘೋಷಿಸ ಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.

ಗಾಂಧಿ ವಿಚಾರಧಾರೆಗಳು,ಮೌಲ್ಯಗಳು ಜಗತ್ತಿಗೇ ಪ್ರಸ್ತುತ- ಸಿದ್ದರಾಮಯ್ಯ Read More

ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ನೇತಾಜಿ ಒಬ್ಬರು:ನಜರ್ ಬಾದ್ ನಟರಾಜ್

ಬೆಂಗಳೂರು: ನೇತಾಜಿ ಎಂದೇ ಪ್ರಸಿದ್ಧರಾದ ಸುಭಾಷ್ ಚಂದ್ರ ಬೋಸ್ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು ಎಂದು ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಬಣ್ಣಿಸಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನದ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ವೇಳೆ ಅವರು ಮಾತನಾಡಿದರು.

ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿಸಲು ಮಹಾತ್ಮ ಗಾಂಧಿಯವರ ಶಾಂತಿ ಮತ್ತು ಅಹಿಂಸೆ ಮಾರ್ಗದಲ್ಲಿ ನಡೆದರೆ ಸುಭಾಷ್ ಚಂದ್ರ ಬೋಸ್ ಅವರು ಇಂಡಿಯನ್ ನ್ಯಾಷನಲ್ ಆರ್ಮಿಯನ್ನು ಸ್ಥಾಪಿಸಿ ಮುನ್ನಡೆಸಿದ ವೀರ ಸೇನಾನಿ ಎಂದು ನುಡಿದರು.

ಹಿಂದುಳಿದ ವರ್ಗದ ಉಪಾಧ್ಯಕ್ಷ ರಮೇಶ ರಾಮಪ್ಪ ಮಾತನಾಡಿ, ಸುಭಾಷ್ ಚಂದ್ರ ಬೋಸ್ ಅವರು ಭಾರತೀಯರಲ್ಲಿ ಸ್ವಾತಂತ್ಯ್ರದ ಕಿಚ್ಚು ಹಚ್ಚಿದ ಮಹಾನ್ ನಾಯಕ ಎಂದು ಹೇಳಿದರು.

‘ನೇತಾಜಿ’ ಎಂದೇ ಗೌರವದಿಂದ ಇಂದು ಭಾರತೀಯರು ಅವರನ್ನು ನೆನಪಿಸಿಕೊಳ್ಳುತ್ತೇವೆ,ಹಲವು ಕಾರಣಗಳಿಂದ ನೇತಾಜಿ ಇಂದಿಗೂ ಭಾರತೀಯರ ಮನಸ್ಸಿನಲ್ಲಿ ಬೇರೂರಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಬಳಗದ ಕಾರ್ಯದರ್ಶಿ ಮಂಜುನಾಥ್ ಮರಾಟಿ ಕ್ಯಾತನಹಳ್ಳಿ ಮತ್ತು ಲೋಕೇಶ್ ಉಪಸ್ಥಿತರಿದ್ದರು..

ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ನೇತಾಜಿ ಒಬ್ಬರು:ನಜರ್ ಬಾದ್ ನಟರಾಜ್ Read More

ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ- ಸಿಎಂ

ಬೆಂಗಳೂರು: ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ, ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದು ಆರೋಪಿಸಿದರು.

ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ- ಸಿಎಂ Read More

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊಸ ವರ್ಷದ ಶುಭಹಾರೈಕೆ

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಮತ್ತಿತರರು ಹೊಸ ವರ್ಷದ ಶುಭಹಾರೈಸಿದರು.

ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್, ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ , ಶಾಫಿಕ್ ಆಹಾಮದ್, ರಮೇಶ್ ರಾಮಪ್ಪ, ಚಂದ್ರು ಮತ್ತಿತರರು ಶುಭ‌ ಕೋರಿದರು.

ಈ ವೇಳೆ ಹೋ ಗುಚ್ಛ ನೀಡಿ ಈ ಹೊಸ ವರ್ಷ ದಲ್ಲೂ ನಮ್ಮ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಯಾಗಿ ನಾಡಿನ ರೈತಾಪಿ ವರ್ಗ ಮತ್ತು ಎಲ್ಲಾ ಜನತೆಗೆ ಒಳಿತಾಗಲಿ ಎಂದು ಹಾರೈಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊಸ ವರ್ಷದ ಶುಭಹಾರೈಕೆ Read More

ಯುವ ಜನತೆಯ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಿ: ಸಿಎಂ

ಬೆಂಗಳೂರು, ಜ.1: ಯುವ ಜನತೆ ನಮ್ಮ ಆಸ್ತಿ,ಅವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸುವ ಸವಾಲನ್ನು ಸ್ವೀಕರಿಸುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಐಎಎಸ್,ಐಪಿಎಸ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿ ಸಿಎಂ ಮಾತನಾಡಿದರು.

ಡ್ರಗ್ಸ್ ಹಾವಳಿ, ಅಪರಾಧಿಕ ಜಗತ್ತಿನ‌ ಕಡೆಗೆ ಯುವ ಜನತೆ ಆಕರ್ಷಿತರಾಗದಂತೆ ಎಚ್ಚರ ವಹಿಸಿ. ತಂತ್ರಜ್ಞಾನ ಮತ್ತು ವಿಜ್ಞಾನದ ಪ್ರಗತಿ ಆಗುತ್ತಿದೆ. ಈ ಪ್ರಗತಿ ಅಪರಾಧಗಳಿಗೆ ಬಳಕೆ ಆಗದೆ ಯುವ ಜನರ ಭವಿಷ್ಯ ರೂಪಿಸಲು ಸಹಕಾರಿ ಆಗುವಂತೆ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ, ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಮಸ್ಯೆಗಳನ್ನು, ಸಂದರ್ಭಗಳನ್ನು ನಿರ್ವಹಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು.

ಆಡಳಿತಾಂಗದಲ್ಲಿ ಐಎಎಸ್,ಐಪಿಎಸ್,ಐಆರ್ ಎಸ್, ಐಎಫ್ಎಸ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚು. ನಾವು ಕಾನೂನುಗಳನ್ನು ರಚಿಸಿ, ಜಾರಿ ಆಗುವ ದಿಕ್ಕಿನಲ್ಲಿ ನಿರಂತರ ನಿಗಾ ವಹಿಸುತ್ತೇವೆ. ಅಧಿಕಾರಿ ವರ್ಗ ಸಮಾಜಕ್ಕೆ ಪೂರಕವಾಗಿ ಕ್ರಿಯಾಶೀಲತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಿಎಂ ಹೇಳಿದರು.

ಭಾರತದ ಆರ್ಥಿಕತೆ ಕುಸಿತ ಕಂಡಿದ್ದಾಗ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಿದರು. ದೇಶದ ಆರ್ಥಿಕ‌ ಬೆಳವಣಿಗೆ ಆಗಿ ಇದರ ಲಾಭ ದೇಶದ ಜನರಿಗೆ ಲಭಿಸುವಂತೆ ಮಾಡಿದರು. ಸಂವಿಧಾನದ ನಿರ್ದೇಶಕ ತತ್ವಗಳಾದ ಸಮಾನತೆ, ಜಾತ್ಯತೀತತೆ, ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ದೇಶದ ಜನರ ಮೂಲಭೂತ ಹಕ್ಕುಗಳನ್ನಾಗಿ ಮಾಡಿದರು. ಮಾಹಿತಿ ಹಕ್ಕು, ಆಹಾರದ ಹಕ್ಕು, ಶಿಕ್ಷಣದ ಹಕ್ಕುಗಳನ್ನು ಕಡ್ಡಾಯ ಮಾಡಿದರು. ಆ ಮೂಲಕ ಸಮಾನತೆಯೆಡೆಗೆ ದೇಶವನ್ನು ಮುನ್ನಡೆಸಿದರು ಎಂದು ವಿವರಿಸಿದರು.

ಸಮಾನ ಅವಕಾಶಗಳು ಸಿಕ್ಕಾಗ ಸಮಾನತೆ ದಿಕ್ಕಿಗೆ ನಾವು ಸಾಗಬಹುದು ಎನ್ನುವ ಕಾರಣದಿಂದಲೇ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಜನರ ಕೈಯಲ್ಲಿ ಕಾಸು ಇರಬೇಕು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಇದಕ್ಕೆ ತಕ್ಕಂತೆ ರಾಜ್ಯದ ಜನರ ಜೇಬಲ್ಲಿ ಹಣ ಇರುವ ಗ್ಯಾರಂಟಿಗಳನ್ನು ನಾವು ಜಾರಿ ಮಾಡಿದೆವು. ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರ ಜನರಿಗೆ ಹಣ ತಲುಪಿಸುತ್ತಿದ್ದೇವೆ. ಇದು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನೀವು ಅಧಿಕಾರಿ ವರ್ಗ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ರಾಜ್ಯದಲ್ಲಿ ಅದ್ಭುತ ಬದಲಾವಣೆ, ಸುಧಾರಣೆಗಳನ್ನು ತರಲು ಸಾಧ್ಯವಿದೆ. ಇದಕ್ಕಾಗಿ ನಿಮ್ಮ ಕಾರ್ಯಕ್ಷಮತೆ ಬಳಕೆಯಾಗಲಿ ಎಂದು ಹೇಳಿದರು.

ಅಧಿಕಾರಿ ವರ್ಗಕ್ಕೆ ನಮ್ಮ ಸಲಹೆಯ ಅಗತ್ಯ ಇಲ್ಲ. ನೀವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡರೆ ಸಾಕು. ಭ್ರಷ್ಟಾಚಾರ ವ್ಯವಸ್ಥೆ ಕಡಿಮೆ ಆಗುವ ಬದಲಿಗೆ ಹೆಚ್ಚಾಗುತ್ತಿರುವುದು ದುರಂತ. ಆದ್ದರಿಂದ ನಾವೆಲ್ಲರೂ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಪ್ರಾಮಾಣಿಕವಾಗಿ ನಡೆದುಕೊಳ್ಳೋಣ ಎಂದು ತಿಳಿಸಿದರು.

ಹಣ ಸಂಗ್ರಹಿಸುವ ಇಲಾಖೆಗಳು ಮತ್ತು ಹಣ ಖರ್ಚು ಮಾಡುವ ಇಲಾಖೆಗಳೆರಡೂ ಸಮತೂಕದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಎಲ್ಲಾ ಹಿರಿಯ ಅಧಿಕಾರಿಗಳು ಹಾಗೂ
ಸಚಿವ ಜಮೀರ್ ಅಹಮದ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ದರು.

ಯುವ ಜನತೆಯ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಿ: ಸಿಎಂ Read More