ವಿವಿಧೆಡೆ ದಾಳಿ‌ ಮಾಡಿ ಅಧಿಕಾರಿಗಳಿಗೆ ಬೆವರಿಳಿಸಿದ ಲೋಕಾ

ಬೆಳಗಾವಿ: ರಾಜ್ಯದ ವಿವಿಧೆಡೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಶಾಕ್​​ ಕೊಟ್ಟಿದ್ದಾರೆ.

ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು,ವಿಜಯನಗರ, ಬೆಂಗಳೂರು ಸೇರಿ ವಿವಿಧೆಡೆ ಲೋಕಾಯುಕ್ತರು ದಾಳಿ ನಡೆಸಿ ಅಧಿಕಾರಿಗಳ ಬೆವರಿಳಿಸಿದ್ದಾರೆ.
ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ್​ ಅವರ ಧಾರವಾಡದ ಸಿಲ್ವರ್ ಆರ್ಕೆಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ರಾಜಶೇಖರ್​​ಗೆ ಸೇರಿದ ಒಟ್ಟು ಮೂರು ಕಡೆ ರೇಡ್​​ ನಡೆದಿದೆ. ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್​ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೂ ದಾಳಿ ಮಾಡಲಾಗಿದೆ.

ಲೋಕಾಯುಕ್ತ ಸಿಬ್ಬಂದಿ ಕಂಡು ಬೆದರಿದ ರಾಜಶೇಖರ್ ಅವರು​​ ಸುಮಾರು 50 ಸಾವಿರ ರೂ. ಹಣವನ್ನು ಕಮೋಡ್‌ಗೆ ಸುರಿದು ಫ್ಲಶ್​​ ಮಾಡಿದ್ದಾರೆ. ಸುಮಾರು ಅರ್ಧಗಂಟೆ ಕಾಲ ಲೊಕಾಯುಕ್ತ ಪೊಲೀಸರನ್ನು ಮನೆ ಹೊರಗೆ ಕಾಯಿಸಿ ಬಳಿಕ ಬಾಗಿಲು ತೆಗೆದಿದ್ದಾರೆ ಎನ್ನಲಾಗಿದೆ.

ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ನಗರದ ಬಸವನಗುಡಿ ಪ್ರದೇಶದಲ್ಲಿರುವ ರೂಪ್ಲಾ ನಾಯ್ಕ್ ಅವರ ನಿವಾಸ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸುದೀರ್ಘ ಪರಿಶೀಲಿಸಿದರು.

ಬೆಳಗ್ಗೆಯಿಂದಲೇ ಅಧಿಕಾರಿಗಳು ದಾಖಲೆಗಳು, ಬ್ಯಾಂಕ್ ಖಾತೆಗಳು, ಆಸ್ತಿ ದಾಖಲೆಗಳು ಸೇರಿದಂತೆ ವಿವಿಧ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇದರ ಜೊತೆಗೆ, ರೂಪ್ಲಾ ನಾಯ್ಕ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ ನಿವಾಸದ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು.

ವಿಜಯನಗರ ಡಿಎಚ್‌ಒ ಡಾ. ಎಲ್.ಆರ್. ಶಂಕರ್ ನಾಯ್ಕ್ ಅವರ ಮನೆ, ಕಚೇರಿ ಹಾಗೂ ಪತ್ನಿ ನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಯ ಮೇಲೆ ರೇಡ್ ಮಾಡಲಾಗಿದೆ.
ಡಿಎಚ್‌ಒ ಡಾ. ಎಲ್.ಆರ್. ಶಂಕರ್ ನಾಯ್ಕ್ ಅವರು ತಮ್ಮ ಮನೆಯ ಸಮೀಪ ಖಾಸಗಿ ಆಸ್ಪತ್ರೆ ನಡೆಸುತ್ತಿದ್ದು, ಲೋಕಾಯುಕ್ತ ಅಧಿಕಾರಿಗಳು ಅಲ್ಲಿಗೆ ಸಹ ತೆರಳಿ ಪರಿಶೀಲನೆ ನಡೆಸಿದರು.

ವಿವಿಧೆಡೆ ದಾಳಿ‌ ಮಾಡಿ ಅಧಿಕಾರಿಗಳಿಗೆ ಬೆವರಿಳಿಸಿದ ಲೋಕಾ Read More

ಬಲ್ಡೋಟ ಉಕ್ಕು ಕಾರ್ಖಾನೆ; ಜಿಲ್ಲಾಧಿಕಾರಿ ವರದಿ ಪರಿಶೀಲಿಸಿ ಸೂಕ್ತ ಕ್ರಮ-ಸಿಎಂ

ವಿಜಯನಗರ: ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು,ವರದಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಕೆಲಸವನ್ನು ಸ್ಥಗಿತಗೊಳಿಸುವಂತೆ ಆದೇಶವಿದ್ದರೂ ಕೆಲಸ ಮುಂದುವರೆದಿರುವ ಬಗ್ಗೆ ವರದಿ ಬಂದ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿದ್ದಾರಲ್ಲ ಎಂಬ‌ ವರದಿಗಾರರ ಪ್ರಶ್ನೆಗೆ, ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹಣದ ಕೊರತೆಯಿಲ್ಲ, ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ ಎಂದು ಸಿಎಂ ತಿಳಿಸಿದರು.

ಗ್ರೇಟರ್ ಬೆಂಗಳೂರು ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಟೀಕಿಸಿದ್ದಾರಲ್ಲ ಎಂಬ ಇನ್ನೊಂದು ಪ್ರಶ್ನೆಗೆ, ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ವಿಭಾಗಗಳನ್ನು ರಚಿಸಬೇಕೆಂದು ಅಂದಿನ ಬಿಜೆಪಿಯ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ಅವರು ಯೋಜಿಸಿದ್ದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನ ನೆಲೆಸಿದ್ದಾರೆ, ಈ ನಗರದ ಆಡಳಿತವನ್ನು ಒಂದು ಮಹಾನಗರ ಪಾಲಿಕೆ ನಿರ್ವಹಿಸುವುದು ಕಷ್ಟ, ಆದ್ದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಹೆಚ್ಚು ಮಹಾನಗರಪಾಲಿಕೆ ಗಳನ್ನು ರಚಿಸಬೇಕೆಂಬ ಚಿಂತನೆಯಿಂದ ನನ್ನ ಹಿಂದಿನ ಮುಖ್ಯಮಂತ್ರಿಯ ಅವಧಿಯಲ್ಲಿ ಬಿ.ಎಸ್.ಪಾಟೀಲ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು, ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ, ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅನರ್ಹತೆಯ ಕುರಿತ ಪ್ರಶ್ನೆಗೆ, ನ್ಯಾಯಾಲಯ ಅವರಿಗೆ ಏಳು ವರ್ಷ ಶಿಕ್ಷೆ ನೀಡಿದೆ ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು,ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಸಮಯ್ಯ ತನಗೆ ಸಹಾಯ ಮಾಡಿದ್ದರು ಎಂದು ಜನಾರ್ಧನ ರೆಡ್ಡಿಯವರ ಹೇಳಿದ್ದಾರಲ್ಲಾ ಎಂದು ಕೇಳಿದ್ದಕ್ಕೆ ಅವರ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರು ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಲ್ಡೋಟ ಉಕ್ಕು ಕಾರ್ಖಾನೆ; ಜಿಲ್ಲಾಧಿಕಾರಿ ವರದಿ ಪರಿಶೀಲಿಸಿ ಸೂಕ್ತ ಕ್ರಮ-ಸಿಎಂ Read More

ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಕ್ಯಾಲೆಂಡರ್,ಪಂಚಾಂಗ ಬಿಡುಗಡೆ

ಮೈಸೂರು: ಚಂದ್ರಮಾನ ಯುಗಾದಿ ಹಬ್ಬದ ಅಂಗವಾಗಿ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಶ್ರೀ ಸ್ವಾಮಿಗೆ ವಿಶೇಷ ಪೂಜಾ- ಕೈಂಕರ್ಯ ನೆರವೇರಿಸಲಾಯಿತು.

ಈ ವೇಳೆ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಇದೇ ವೇಳೆ ದೇವಾಲಯದ ವತಿಯಿಂದ ಹೊರತರಲಾಗಿರುವ ನೂತನ ಸಂವತ್ಸರದ ಕ್ಯಾಲೆಂಡರ್ ಹಾಗೂ ಪಂಚಾಂಗವನ್ನು ಭಕ್ತಾದಿಗಳಿಗೆ ವಿತರಿಸಲಾಯಿತು.

ದೇವಾಲಯದ ಆಡಳಿತಾಧಿಕಾರಿ ಡಾ.ಎನ್.ಶ್ರೀನಿವಾಸನ್,ರಕ್ತದಾನಿ ಮಂಜು, ಸಹನಾ ಗೌಡ, ಗೀತಾ ಮತ್ತಿತರರು ಉಪಸ್ಥಿತರಿದ್ದರು.

ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಕ್ಯಾಲೆಂಡರ್,ಪಂಚಾಂಗ ಬಿಡುಗಡೆ Read More

ಮನಸೂರೆಗೊಂಡ ವಿಕೆ ವಿಜಯ ವೈಭವ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ವಿಜಯನಗರ ಮೂರನೇ ಹಂತದಲ್ಲಿರುವ ವಿಕೆ ಪಬ್ಲಿಕ್ ಸ್ಕೂಲ್ ತನ್ನ ಚೊಚ್ಚಲ ವಾರ್ಷಿಕೋತ್ಸವವನ್ನು ವಿಕೆ ವಿಜಯ ವೈಭವ ಎಂಬ ಹೆಸರಿನಲ್ಲಿ ವಿಶೇಷವಾಗಿ ಆಚರಿಸಿತು.

ಭಾನುವಾರ ಸಂಜೆ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಸುಮಾರು 1500 ಕ್ಕೂ ಹೆಚ್ಚು ಪ್ರೇಕ್ಷಕರನ್ನು ತನ್ನತ್ತ ಸೆಳೆದಿದ್ದು ವಾರಾಂತ್ಯವನ್ನು ಮತ್ತಷ್ಟು ಕಂಗೊಳಿಸುವಂತೆ ಮಾಡಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಸಕ ಜಿ. ಟಿ. ದೇವೇಗೌಡರು ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶಾಲಾ ವಾರ್ಷಿಕೋತ್ಸವ ಮುಖ್ಯ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಮಕ್ಕಳಲ್ಲಿರುವ ಕಲೆಯನ್ನು ಗುರುತಿಸಿ ಹೊರ ತರಲು ಪೋಷಕರು ಉತ್ತೇಜನ ನೀಡುವಂತೆ ಪ್ರೇರೇಪಿಸಿರುತ್ತಾರೆ ಎಂದು ತಿಳಿಸಿದರು.

ಮತ್ತೊಬ್ಬ ಅತಿಥಿ ಶಾಸಕ ಕೆ. ಹರೀಶ್ ಗೌಡರು ಮಾತನಾಡಿ, ಕೇವಲ ಎರಡು ವರ್ಷಗಳಲ್ಲಿ ಶಾಲೆ ನಡೆದುಬಂದ ಹಾದಿ ಅತ್ಯದ್ಭುತವಾಗಿದೆ, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಎಂದು ತಿಳಿಸಿದರು.

ಮಾಜಿ ಸಚಿವಎಂ. ಶಿವಣ್ಣ ಅವರು
ಮಾತನಾಡುತ್ತಾ ಪ್ರತಿದಿನವೂ ಶಾಲೆಯನ್ನು ಬಹು ಸೂಕ್ಷ್ಮವಾಗಿ ಗಮನಿಸುತ್ತಾ ಬಂದಿದ್ದು ಬೆಳಗಿನ ಪ್ರಾರ್ಥನೆಯಿಂದ ಹಿಡಿದು ಪ್ರತಿಯೊಬ್ಬರಲ್ಲೂ ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿಯುವಲ್ಲಿ ಶಾಲೆ ಮುಖ್ಯ ಪಾತ್ರ ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾ ವಿಕಾಸ್ ಇಂಜಿನಿಯರಿಂಗ್ ಕಾಲೇಜಿನ
ಕಾರ್ಯದರ್ಶಿ ಕವಿಶ್ ಗೌಡ ವಾಸು ಮಾತನಾಡಿ, ಕಡಿಮೆ ಶುಲ್ಕ ತೆಗೆದುಕೊಂಡು ಎಲ್ಲಾ ಸೌಕರ್ಯವನ್ನು ನೀಡುತ್ತಾ, ಪ್ರತಿಯೊಂದರಲ್ಲೂ ಅಚ್ಚುಕಟ್ಟಾಗಿ ಶಿಸ್ತುಬದ್ಧವಾಗಿ ಮಕ್ಕಳಿಗೆ ಶಿಕ್ಷಣ ಒದಗಿಸಿ ಕೊಡುವುದರಲ್ಲಿ ವಿಕೆ ಪಬ್ಲಿಕ್ ಶಾಲೆ ಮೈಸೂರಿನ ಜನತೆಗೆ ಅತ್ಯುತ್ತಮವಾದ ಒಂದು ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಈ ಸಂಸ್ಥೆಯ ಕಾರ್ಯದರ್ಶಿ ರವಿಕುಮಾರ್, ಅಧ್ಯಕ್ಷ ಎಮ್‌.ಟಿ ಮಂಜುನಾಥ್‍, ಸದಸ್ಯರುಗಳಾದ ಬಿ. ಸುರೇಶ್ ಬಾಬು, ಗೋವಿಂದರಾಜು, ಪ್ರೊ. ಮಹದೇವಪ್ಪ, ರಾಮನಾಯಕ್ ಹಾಗೂ ಲೋಬೋ ಉಪಸ್ಥಿತರಿದ್ದರು.

ಕರ್ನಾಟಕದ ಹಾಗೂ ದೇಶದ ಹಲವಾರು ಭಾಗಗಳಿಂದ ನೃತ್ಯರೂಪಗಳನ್ನು ಆರಿಸಿ, ನೋಡುಗರಿಗೆ ಮೈಮನ ಸೆಳೆಯುವಂತ ಕಾರ್ಯಕ್ರಮಗಳನ್ನ ವಿಕೆ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀಡುವ ಮೂಲಕ ಪ್ರೇಕ್ಷಕರು ಕುಣಿದು ಕೊಪ್ಪಳಿಸುವಂತೆ ಮಾಡಿತು.

ಮನಸೂರೆಗೊಂಡ ವಿಕೆ ವಿಜಯ ವೈಭವ Read More

ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ಲಡ್ಡು‌ ವಿತರಣೆ

ಮೈಸೂರು,ಜ.1: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.

2025ನೇ ವರ್ಷದ ಮೊದಲ ದಿನವನ್ನ ಯೋಗನರಸಿಂಹ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಳ್ಳಲಾದ ಪೂಜಾ ಕೈಂಕರ್ಯಗಳು ದೇವಾಲಯದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.

ಬೆಳಿಗ್ಗೆ 4 ಗಂಟೆಯಿಂದಲೇ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು ವಿತರಿಸಲಾಯಿತು.

ಭಾಷ್ಯಂ ಸ್ವಾಮೀಜಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ನೇತೃತ್ವದಲ್ಲಿ ಭಕ್ತರಿಗೆ ಲಾಡು ಹಾಗೂ ಪುಳಿಯೊಗರೆ ಪ್ರಸಾದ ವಿತರಿಸಲಾಯಿತು.

ಮುಂಜಾನೆಯಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿ ಸರದಿ ಸಾಲಿನಲ್ಲಿ ನಿಂತು ಯೋಗನರಸಿಂಹ ಸ್ವಾಮಿಯ ದರುಶನ ಪಡೆದರು.

2 ಕೆಜಿ ತೂಕದ 10 ಸಾವಿರ ಲಡ್ಡು ಹಾಗೂ 150 ಗ್ರಾಂ ತೂಕದ 2 ಲಕ್ಷ ಲಡ್ಡುಗಳನ್ನು ಭಕ್ತರಿಗೆ ವಿತರಿಸಲಾಯಿತು.

1994ರಿಂದ ಆರಂಭವಾದ ಲಡ್ಡು ವಿತರಣಾ ಕಾರ್ಯ ನಿರಂತರವಾಗಿ ಪ್ರತಿ ವರ್ಷ ಮುಂದುವರೆಯುತ್ತಿದೆ.

ರಾತ್ರಿ 11 ಗಂಟೆ ವರೆಗೆ ಲಡ್ಡು ವಿತರಿಸಲಾಗುತ್ತದೆ ಎಂದು ಇದೇ ವೇಳೆ ಭಾಷ್ಯಂ ಸ್ವಾಮೀಜಿ ತಿಳಿಸಿದರು.

ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ಲಡ್ಡು‌ ವಿತರಣೆ Read More