ಯತ್ನಾಳ್ ಹೊಸ ಪಕ್ಷ:ಯಡಿಯೂರಪ್ಪ ಓಲೈಕೆ ಬಿಡಲಿ-ಹೈಕಮಾಂಡ್ ಗೆ ಎಚ್ಚರಿಕೆ

ವಿಜಯಪುರ: ಬಿಜೆಪಿಯಿಂದ ನಾನು ಉಚ್ಛಾಟನೆಯಾಗಿಲ್ಲ,ಹೊರಗೂ ಬಂದಿಲ್ಲ,ಒಂದು ವೇಳೆ ಅವರಿಗೆ ಬುದ್ದಿ ಬಂದು ನನ್ನನ್ನ ಕರೆದರೆ ಇಲ್ಲೇ ಇರುತ್ತೇನೆ,ಇಲ್ಲದಿದ್ದರೆ ನನ್ನ ದಾರಿ ನೋಡಿಕೊಳ್ಳುತ್ತೇನೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ಕುಟುಂಬ ರಾಜಕಾರಣಕ್ಕೆ ಬೆಲೆ ಕೊಡುತ್ತಿದ್ದಾರೆ ಅವರು ಯಡಿಯೂರಪ್ಪ ಮತ್ತು ಅವರ ಕುಟುಂಬದವರನ್ನು ದೂರ ಇಡುವವರೆಗೂ ಅವರು ಉದ್ದಾರ ಆಗುವುದಿಲ್ಲ ಎಂದು ಹೇಳಿದರು.

ನನ್ನದೇನಿದ್ದರೂ ಇನ್ನು ಸಿಕ್ಸರ್ ಬಾರಿಸುವುದಷ್ಟೇ, ಫೋರ್, ಡಬಲ್,ಸಿಂಗಲ್ ಯಾವುದೂ ಇಲ್ಲ, ಸಿಕ್ಸರ್ ಹೊಡೆದೆ ನಾನು ಮುಂದಿನ ನಡೆ ತೀರ್ಮಾನಿಸುತ್ತೇನೆ, ಅನಿವಾರ್ಯವಾಗಿ ಹೊಸ ಪಕ್ಷ ಕಟ್ಟಬೇಕಾಗುತ್ತದೆ ಎಂದು ಬಿಜೆಪಿ ಹೈಕಮಾಂಡ್ ಗೆ ಎಚ್ಚರಿಕೆ ನೀಡಿದರು.

ಚುನಾವಣೆಗೆ ಇನ್ನು ಮೂರು ವರ್ಷಗಳು ಇದೆ ಅಲ್ಲಿಯವರೆಗೂ ನಮ್ಮ ಅಭಿಮಾನಿಗಳು ಮತ್ತು ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ ನಮ್ಮ ಜನ ಏನು ತೀರ್ಮಾನ ತೆಗೆದುಕೊಳ್ಳುವಂತೆ ಹೇಳುತ್ತಾರೋ ನೋಡುತ್ತೇನೆ, ಬಿಜೆಪಿಯವರಿಗೆ ಬುದ್ಧಿ ಬಂದು ಯಡಿಯೂರಪ್ಪ ಕುಟುಂಬವನ್ನು ದೂರ ಇಟ್ಟು ಹಿಂದುತ್ವಕ್ಕೆ ಬೆಲೆಕೊಟ್ಟು ನನ್ನನ್ನು ಬೆಂಬಲಿಸಿದರೆ ಎಲ್ಲಿಯೂ ಹೋಗುವುದಿಲ್ಲ ಇಲ್ಲೇ ಮುಂದುವರೆಯುತ್ತೇನೆ ಇಲ್ಲದಿದ್ದರೆ ನಾನು ಪಕ್ಷ ಕಟ್ಟುತ್ತೇನೆ,ಪ್ರೊಸೆಸಿಂಗ್ ಪ್ರಾರಂಭ ವಾಗಿದೆ ಎಂದು ನೇರವಾಗಿ ಬಸನಗೌಡ ಪಾಟೀಲ್ ನುಡಿದರು.

ಯತ್ನಾಳ್ ಹೊಸ ಪಕ್ಷ:ಯಡಿಯೂರಪ್ಪ ಓಲೈಕೆ ಬಿಡಲಿ-ಹೈಕಮಾಂಡ್ ಗೆ ಎಚ್ಚರಿಕೆ Read More

ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ:ಸಿಎಂ

ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಡಕ್ಕಾಗಿ ತಿಳಿಸಿದರು.

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು,ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಕೋರಿದರು.

ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ದು, ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ನನಗೂ ಸೇರಿ ಎಲ್ಲರಿಗೂ ಕಾನೂನು ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದು ಹೇಳಿದರು.

ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದು ಹೇಳಿದರು.

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ , ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಸಿದ್ದರಾಮಯ್ಯ ತಿಳಿಸಿದರು.

ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ:ಸಿಎಂ Read More

ಜಗನ್ ಮೋಹನ್ ರೆಡ್ಡಿಯವರನ್ನ ಬಂಧಿಸಲಿ:ಈಶ್ವರಪ್ಪ

ವಿಜಯಪುರ: ಜಗನ್ ಮೋಹನ್ ರೆಡ್ಡಿ ಅವರು ಸಿಎಂ ಆದ ನಂತರ ಇಡೀ ಪ್ರಪಂಚಕ್ಕೆ ಮಾಡಿದ್ದು ಮೋಸ,ಅವರನ್ನು ಬಂಧಿಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದೊಂದಿಗೆ
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಕೊಬ್ಬು ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿದೇಶಿ ಕ್ರಿಸ್ಚಿಯನ್ ಮಷಿನರಿಗಳಿಂದ ಈ ತರಹ ನಡೆದಿದೆ. ಹಿಂದುತ್ವ ಪ್ರತಿಪಾದಕರಿಗೆ, ಹಿಂದೂಗಳ ಶ್ರದ್ಧೆಗೆ ಭಂಗ ತರುವ ಕೆಲಸ ಮಾಡಿದ್ದಾರೆ. ಈಗಲೂ ನಾವು ಮಾಡಿಲ್ಲ ಎಂದು ಹೇಳುತ್ತಾರೆ. ಲ್ಯಾಬ್ ರಿಪೋರ್ಟ್ ಬಗ್ಗೆ ಇವರಿಗೆ ನಂಬಿಕೆ ಇಲ್ಲವಾ ಎಂದು ಪ್ರಶ್ನಿಸಿದರು.

ನಮ್ಮ ಶ್ರದ್ಧೆ ಹಾಗೂ ಶ್ರದ್ಧಾಕೇಂದ್ರಕ್ಕೆ ಅಪಮಾನ ಮಾಡುವವರಿಗೆ ತಕ್ಕ ಶಿಕ್ಷೆ ಆಗಬೇಕು, ಇದರಲ್ಲಿ ವಿದೇಶಿ ಸಂಚಿದೆ, ಈ ಪ್ರಕರಣ ಸಿಬಿಐಗೆ ತನಿಖೆಗೆ ಕೊಡಬೇಕು ಎಂದು ಒತ್ತಾಯಿಸಿದರು.

ದೇವರ ದಯೆಯಿಂದ ಇಡೀ ದೇಶದ ಎಲ್ಲ ಪಕ್ಷದ ನಾಯಕರು ಇದನ್ನು ಖಂಡಿಸಿದ್ದಾರೆ. ಇದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ, ತಿರುಪತಿ ತಿಮ್ಮಪ್ಪನ ಬಗ್ಗೆ ಇರುವ ಶ್ರದ್ಧೆಯಿಂದ ಎಲ್ಲರೂ ಇದನ್ನು ಖಂಡಿಸಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು.

ಜಗನ್ ಮೋಹನ್ ರೆಡ್ಡಿಯವರನ್ನ ಬಂಧಿಸಲಿ:ಈಶ್ವರಪ್ಪ Read More