ಅತ್ತಿಗೆಯ ಕೊಂದು ರುಂಡ ಹಿಡಿದು ಓಡಾಡಿದ ಮೈದುನ!

ಕೋಲ್ಕತ್ತಾ: ವ್ಯಕ್ತಿಯೊಬ್ಬ‌ ತನ್ನ ಅತ್ತಿಗೆಯನ್ನೇ ಕೊಚ್ಚಿ ಕೊಂದು ರುಂಡವನ್ನು ಹಿಡಿದು ಬೀದಿಗಳಲ್ಲಿ ಸುತ್ತುತ್ತಾ ಆತಂಕ ಸೃಷ್ಟಿಸಿದ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬಸಂತ್‌ನಲ್ಲಿ ನಡೆದಿದೆ.

ಬಿಮಲ್ ಮಂಡಲ್ ಅತ್ತಿಗೆಯನ್ನೇ ಕೊಂದ ಪಾಪಿ ಮೈದುನ, ಸತಿ ಮಂಡಲ್ ಕೊಲೆಯಾದ ಅತ್ತಿಗೆ. ಕೌಟುಂಬಿಕ ಕಲಹ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಸತಿ ಮಂಡಲ್ ಮತ್ತು ಬಿಮಲ್ ಮಂಡಲ್ ನಡುವೆ ಕೆಲವು ಸಮಯದಿಂದ ಕೌಟುಂಬಿಕ ಸಮಸ್ಯೆಗಳ ಬಗ್ಗೆ ಜಗಳ ನಡೆದಿತ್ತು.ಜತೆಗೆ ಕೊಲೆ ಮಾಡುವುದಾಗಿಯೂ ಹಲವು ಬಾರಿ ಸಾರ್ವಜನಿಕವಾಗಿಯೇ ಬೆದರಿಕೆ ಹಾಕಿದ್ದನಂತೆ.

ಹರಿತವಾದ ಆಯುಧದಿಂದ ಆಕೆಯ ತಲೆಯನ್ನು ಕತ್ತರಿಸಿ ರಕ್ತಸಿಕ್ತ ರುಂಡ ಮತ್ತು ರಕ್ತಸಿಕ್ತ ಚಾಕುವಿನಿಂದ ಸ್ವಲ್ಪ ಸಮಯದವರೆಗೆ ರಸ್ತೆಯಲ್ಲಿ ಓಡಾಡುತ್ತಾ, ತನಗೆ ಆಗಿರುವ ಅನ್ಯಾಯಕ್ಕೆ ಸೇಡು ತೀರಿಸಿಕೊಂಡಿದ್ದೇನೆ ಎಂದು ಕೂಗುತ್ತಾ ಸ್ಥಳೀಯರಲ್ಲಿ ಆತಂಕ ಉಂಟು ಮಾಡಿದ್ದ.

ಕೆಲವರು ಈ ಘಟನೆಯನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ ಸ್ವಲ್ಪ ಸಮಯದ ನಂತರ, ಬಿಮಲ್ ಪೊಲೀಸ್ ಠಾಣೆ ರುಂಡ ಮತ್ತು ಚಾಕುವಿನೊಂದಿಗೆ ಬಂದು ಶರಣಾಗಿದ್ದಾನೆ. ಪೊಲೀಸರೂ ಕೂಡಾ ಅವನನ್ನು ನೋಡಿ ಶಾಕ್ ಆಗಿದ್ದಾರೆ.

ಅತ್ತಿಗೆಯ ಕೊಂದು ರುಂಡ ಹಿಡಿದು ಓಡಾಡಿದ ಮೈದುನ! Read More

ಮುರ್ಷಿದಾಬಾದ್‌ನಲ್ಲಿ ನಡೆದ ಕೋಮು ಹಿಂಸಾಚಾರ ಪೂರ್ವಯೋಜಿತ:ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮುರ್ಷಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರವು ಪೂರ್ವಯೋಜಿತ,ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ಸಹಾಯ ಮಾಡುವ ಸಲುವಾಗಿ ಬಿಎಸ್‌ಎಫ್ ಮತ್ತು ಬಿಜೆಪಿಯ ಒಂದು ಭಾಗ ಉದ್ವಿಗ್ನತೆ ಹೆಚ್ಚಿಸುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಬುಧವಾರ ಮುಸ್ಲಿಂ ಧಾರ್ಮಿಕ ಮುಖಂಡರೊಂದಿಗಿನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಕ್ಫ್ (ತಿದ್ದುಪಡಿ) ಕಾಯ್ದೆಯು ದೇಶವನ್ನು ವಿಭಜಿಸುತ್ತದೆ. ಹೀಗಾಗಿ ಇದನ್ನು ಜಾರಿಗೆ ತರದಂತೆ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ನಿಯಂತ್ರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದರು.

ಅಮಿತ್ ಶಾ ಅವರು ತಮ್ಮ ಸ್ವಂತ ರಾಜಕೀಯ ಲಾಭಕ್ಕಾಗಿ ರಾಷ್ಟ್ರಕ್ಕೆ ಹೆಚ್ಚು ಹಾನಿ ಮಾಡಿದ್ದಾರೆ ಎಂದು ಇದೇ ವೇಳೆ ಮಮತಾ ಆರೋಪಿಸಿದರು.

ಬಂಗಾಳವು ಬಾಂಗ್ಲಾದೇಶ, ನೇಪಾಳ ಮತ್ತು ಭೂತಾನ್‌ನೊಂದಿಗೆ ಗಡಿಗಳನ್ನು ಹಂಚಿಕೊಳ್ಳುತ್ತದೆ. ಇವೆರಡೂ ಪಶ್ಚಿಮ ಬಂಗಾಳದಲ್ಲಿ ಅಶಾಂತಿಗೆ ಕಾರಣವಾಗಿವೆ. ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಬಿಎಸ್‌ಎಫ್ ನ ಒಂದು ವಿಭಾಗ ಮತ್ತು ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಕೆಲವು ಕೇಂದ್ರದ ಸಂಸ್ಥೆಗಳು ಭಾಗಿಯಾಗಿವೆ ಎಂದು ದೂರಿದರು.

ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ ಅವರು, ಬಿಎಸ್‌ಎಫ್ ಪಾತ್ರದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಬಿಎಸ್‌ಎಫ್‌ನ ಕ್ರಮಗಳ ಬಗ್ಗೆ ತನಿಖೆ ಆರಂಭಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.

ಮುರ್ಷಿದಾಬಾದ್ ಗಲಭೆಯಲ್ಲಿ ಗಡಿಯಾಚೆಗಿನ ಅಂಶಗಳ ಪಾತ್ರವಿದೆ ಎನ್ನುವ ವಿಚಾರ ನನಗೆ ತಿಳಿಯಿತು. ಗಡಿಯನ್ನು ಕಾಯುವುದು ಬಿಎಸ್‌ಎಫ್‌ನ ಪಾತ್ರವಲ್ಲವೇ, ರಾಜ್ಯ ಸರ್ಕಾರವು ಅಂತರರಾಷ್ಟ್ರೀಯ ಗಡಿಯನ್ನು ಕಾಯುವುದಿಲ್ಲ. ಕೇಂದ್ರ ಸರ್ಕಾರವು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಹಿಂಸಾಚಾರದ ಸಮಯದಲ್ಲಿ ಕಲ್ಲು ತೂರಲು ಮತ್ತು ಅವ್ಯವಸ್ಥೆ ಸೃಷ್ಟಿಸಲು ಗಡಿ ಬಳಿ ವಾಸಿಸುವ ಸ್ಥಳೀಯ ಯುವಕರಿಗೆ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ಹಣ ನೀಡಿರಬಹುದು. ಆ ಹಣವನ್ನು ಯಾರು ಪಡೆದರು ಎಂಬುದರ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಪ್ರತಿಪಕ್ಷಗಳು ಆರೋಪಿಸಿದಂತೆ ವಕ್ಫ್ ಸಂಬಂಧಿತ ಹಿಂಸಾಚಾರದ ಹಿಂದೆ ಟಿಎಂಸಿ ಕೈವಾಡವಿದ್ದರೆ, ನಮ್ಮ ಪಕ್ಷದ ನಾಯಕರ ಮನೆಗಳ ಮೇಲೆ ಏಕೆ ದಾಳಿ ಮಾಡಲಾಯಿತು? ರಾಮನವಮಿಯ ಸಂದರ್ಭದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ಬಿಜೆಪಿ ನಡೆಸಿದ್ದ ಪ್ರಯತ್ನಗಳು ವಿಫಲವಾಗಿವೆ. ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ‌ಹೇಳಿದರು.

ಪ್ರತಿಯೊಂದು ಸಮುದಾಯದಲ್ಲೂ ದೇಶದ್ರೋಹಿಗಳಿದ್ದಾರೆ ಎಂದು ನಾನು ಹೇಳಲು ಬಯಸುತ್ತೇನೆ. ಬಿಜೆಪಿ ಹಿಂದೂ-ಮುಸ್ಲಿಂ ಹೆಸರಿನಲ್ಲಿ ಜನರನ್ನು ಪ್ರಚೋದಿಸಲು ಪ್ರಯತ್ನಿಸಿದರೆ, ನೀವು ಎದ್ದು ನಿಲ್ಲಬೇಕು. ಇಮಾಮ್ ಸಾಹಬ್ ಕೂಡ ಒಂದು ಪಾತ್ರವನ್ನು ವಹಿಸಬೇಕು. ನಮಗೆ ಶಾಂತಿ ಬೇಕು. ನಾವು ಇಲ್ಲಿರುವವರೆಗೂ, ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಗುಡುಗಿದರು.

ಮುರ್ಷಿದಾಬಾದ್‌ನಲ್ಲಿ ನಡೆದ ಕೋಮು ಹಿಂಸಾಚಾರ ಪೂರ್ವಯೋಜಿತ:ಮಮತಾ ಬ್ಯಾನರ್ಜಿ Read More

ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಹೋಳಿ ಆಚರಣೆ ವೇಳೆ ಘರ್ಷಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಹೋಳಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ತೀವ್ರ ತರ ಘರ್ಷಣೆ ಸಂಬಂಧಿಸಿದೆ.

ಈ ಸಂಬಂಧ ಇಪ್ಪತ್ತೊಂದು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಸೈಂಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘರ್ಷಣೆ ನಡೆದಿದ್ದು, ಅಹಿತಕರ ಘಟನೆಗಳನ್ನು ತಡೆಗಟ್ಟಲು ಪಶ್ಚಿಮ ಬಂಗಾಲ ಸರ್ಕಾರ, ಸೈಂಥಿಯಾ ಪಟ್ಟಣ ಮತ್ತು ಪಕ್ಕದ ಐದು ಪಂಚಾಯತ್ ಪ್ರದೇಶಗಳಲ್ಲಿ ಮಾರ್ಚ್ 17 ರವರೆಗೆ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ. ಹಿಂಸಾಚಾರದಲ್ಲಿ ಎರಡೂ ಗುಂಪುಗಳ ಕೆಲವು ಜನರಿಗೆ ಗಾಯಗಳಾಗಿದ್ದು, ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ,
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಹೋಳಿ ಘರ್ಷಣೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ಸತ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ

ಬಿರ್ಭುಮ್ ಜಿಲ್ಲೆಯ ಕಿರ್ನಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಅನೈಪುರ ಗ್ರಾಮದಲ್ಲಿ ಹೋಳಿ ಆಚರಿಸುತ್ತಿದ್ದ ಹಿಂದೂಗಳ ಮೇಲೆ ಸ್ಥಳೀಯ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಂಚಾಯತ್ ಸದಸ್ಯರ ನೇತೃತ್ವದ ಗುಂಪೊಂದು ದಾಳಿ ಮಾಡಿದೆ ಎಂದು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಆರೋಪಿಸಿದ್ದಾರೆ.

ಹಿಂದೂಗಳು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದ ನಂತರ ಹಿಂಸಾಚಾರ ಭುಗಿಲೆದ್ದಿತು. ದಾಳಿಕೋರರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಲು ನಿಮಗೆ ಎಷ್ಟು ಧೈರ್ಯ ಎಂದು ಪ್ರಶ್ನಿಸಿರುವುದಾಗಿ ಮಾಳವೀಯ ಅವರ ಹೇಳಿದ್ದಾರೆ.

ಸ್ಥಳದಲ್ಲಿ ಪೊಲೀಸರು ಇದ್ದರೂ ಅವರು ಮಧ್ಯಪ್ರವೇಶಿಸಲಿಲ್ಲ. ಬದಲಿಗೆ ದಾಳಿಕೋರರನ್ನು ರಕ್ಷಿಸಿದರು ಎಂದು ಮಾಳವೀಯ ಆರೋಪಿಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಮತ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದೆ. ಪಶ್ಚಿಮ ಬಂಗಾಳವು ಬಾಂಗ್ಲಾದೇಶ ದಂತಾಗಿದೆ ಎಂದು ಮಾಳವೀಯ ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಹೋಳಿ ಆಚರಣೆ ವೇಳೆ ಘರ್ಷಣೆ Read More