ಹಿರಿಯರ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವೆ:ಹೊಯ್ಸಳ

ಮೈಸೂರು: ಯುವ ಕಾಂಗ್ರೆಸ್ ಸಂಘಟನೆಗೆ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವೆ ಎಂದು
ಕೃಷ್ಣರಾಜ ಬ್ಲಾಕ್ ಕ್ಷೇತ್ರದ ಯುವ ಅಧ್ಯಕ್ಷ ಹೊಯ್ಸಳ ತಿಳಿಸಿದರು.

ತಮ್ಮ ಗೆಲುವಿಗೆ ಸಹಕರಿಸಿದ ಮಾಜಿ ಶಾಸಕ ಎಂ ಕೆ ಸೋಮಶೇಖರ್ ಅವರಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಹೊಯ್ಸಳ ರವರು 1708 ಮತ ಪಡೆಯುವ ಮೂಲಕ ಜಯಗಳಿಸಿದ್ದಾರೆ.

ಈ ಚುನಾವಣೆ 2024ರ ಸೆಪ್ಟೆಂಬರ್ ನಲ್ಲಿ ನಡೆದಿತ್ತು, ಅದಕ್ಕೂ ಮೊದಲು ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ನಡೆಸಲಾಗಿತ್ತು, ರಾಜ್ಯದ್ಯಂತ ಏಕಕಾಲದಲ್ಲಿ ಸದಸ್ಯತ್ವ ಅಭಿಯಾನ ಹಾಗೂ ಚುನಾವಣೆ ನಡೆಸಲಾಗಿತ್ತು.ಆದರೆ ಫಲಿತಾಂಶ ಈಗ ಪ್ರಕಟವಾಗಿದೆ.

ಹಾಗಾಗಿ ಹೊಯ್ಸಳ ಅವರು ತಮ್ಮ
ಗೆಲುವಿಗೆ ಸಹಕರಿಸಿದ ಎಂ ಕೆ ಸೋಮಶೇಖರ್ ಅವರಿಗೆ ಸನ್ಮಾನಿಸಿ ಧನ್ಯವಾದ ತಿಳಿಸಿದರು.

ಈ ಚುನಾವಣೆಯಲ್ಲಿ ಕ್ಷೇತ್ರದ ಹಿಂದುಳಿದ ವರ್ಗದ ಉಪಾಧ್ಯಕ್ಷರಾಗಿ
ರಾಕೇಶ, ಮಹಿಳಾ ಉಪಾಧ್ಯಕ್ಷರಾಗಿ ಹೇಮಾ, ಪ್ರಧಾನ ಕಾರ್ಯದರ್ಶಿ ಮಲ್ಲೇಶ್,
ಹೇಮಂತ್ ಕುಮಾರ್, ಅಲ್ಪಸಂಖ್ಯಾತ ಉಪಾಧ್ಯಕ್ಷ ಜುಹೆಬ್
ಅವರು ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ಎನ್ ಎಸ್ ಯು ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಕರಿಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ರೋಹಿತ್ ಸಿಂಗ್ ಮತ್ತಿತರರು ಹಾಜರಿದ್ದರು.

ಹಿರಿಯರ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವೆ:ಹೊಯ್ಸಳ Read More