ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಅಪಘಾತಗಳನ್ನು ತಡೆಗಟ್ಟಲು ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅಧಿಕಾರಿಗಳಿಗೆ ಸೂಚಿಸಿ ದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಬ್ಲಾಕ್ಸ್ಪಾಟ್ಗಳನ್ನು ಗುರುತಿಸಿ ಅಪಘಾತ ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು,ಅವೈಜ್ಞಾನಿಕ ಉಬ್ಬುಗಳು ಇದ್ದರೆ ಕೂಡಲೇ ತೆರವುಗೊಳಿಸಿ. ತೀವ್ರ ತಿರುವು ಇರುವ ರಸ್ತೆಗಳಲ್ಲಿ ತಿರುವುಗಳನ್ನು ಸ್ವಲ್ಪ ಕಡಿಮೆ ಮಾಡಬೇಕೆಂದು ಸಲಹೆ ನೀಡಿದರು.
ಒಟ್ಟಾರೆ ಅಪಘಾತಗಳನ್ನು ಆದಷ್ಟು ಕಡಿಮೆ ಆಮಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಲಕ್ಷ್ಮಿಕಾಂತರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
