ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ನಟ-ರಾಜಕಾರಣಿ ವಿಜಯ್ ದಳಪತಿ ಅವರ ಚುನಾವಣಾ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿದಲ್ಲಿ 35 ಕ್ಕೂ ಹೆಚ್ಚು ಮಂದಿ ದುರ್ಮರಣ ಹೊಂದಿದ್ದಾರೆ.
ಮೃತಪಟ್ಟವರಲ್ಲಿ ಮೂವರು ಮಕ್ಕಳು ಮತ್ತು ವಯಸ್ಕರು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬೆಂಬಲಿಗರೇ ಹೆಚ್ಚು,ರ‍್ಯಾಲಿಗಾಗಿ ಆರು ಗಂಟೆಗಳ ಕಾಲ ಕಾದಿದ್ದರು, ರ‍್ಯಾಲಿ ತಡವಾಗಿ ಬಂದಿದೆ ಹಾಗಾಗಿ ಹೆಚ್ಚಿನ ಜನಸಂದಣಿ ಸೇರಿದ್ದರು.ಆಗ ಕಾಲ್ತುಳಿತ ಸಂಭವಿಸಿ ಉಸಿರುಗಟ್ಟಿ ಜನ ಮೃತಪಟ್ಟಿದ್ದಾರೆ.ಇನ್ನೂ 80 ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು,ಸಾವಿನ ಸಂಖೆ ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಕರೂರಿಗೆ ಧಾವಿಸಿದ್ದಾರೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ತಮಿಳುನಾಡು ರ‍್ಯಾಲಿಯಲ್ಲಿ ನಡೆದ ಘೋರ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.