ಮೈಸೂರು: ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಸರಸ್ವತಿಪುರಂ ಶ್ರೀ ಕೃಷ್ಣಧಾಮದಲ್ಲಿ ಹಮ್ಮಿಕೊಳ್ಳಲಾಯಿತು.
ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ಉಡುಪಿ ಪಲಿಮಾರು ಮಠದ ಸಂಸ್ಥಾನಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಹಾಗೂ ಕಿರಿಯ ಶ್ರೀಗಳಾದ ವಿದ್ಯಾರಾಜೇಶ್ವರತೀರ್ಥ ಶ್ರೀಪಾದಂಗಳವರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು.
ಮುದ್ರಾಧಾರಣೆ ಮಾಡಿ ಮಾತನಾಡಿದ ಶ್ರೀ
ಉಡುಪಿ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ. ಈ ದಿನದಿಂದ ಉತ್ಥಾನದ್ವಾದಶಿಯ ತನಕ ಶ್ರೀಮನ್ನಾರಯಣನು ಯೋಗನಿದ್ರೆಯಲ್ಲಿ ತೊಡಗುತ್ತಾನೆ ಅನ್ನೋ ನಂಬಿಕೆ ಇದೆ ಎಂದು ತಿಳಿಸಿದರು.
ಮಳೆಗಾಲದಲ್ಲಿ ಸೊಳ್ಳೆ, ಕ್ರಿಮಿ ಕೀಟಗಳಿಂದ ಎದುರಾಗುವ ರೋಗ ರುಜಿನಗಳನ್ನು ಎದುರಿಸಲು ಬೇಕಾದ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೂ ತಪ್ತ ಮುದ್ರಾಧಾರಣೆ ಪೂರಕವಾಗಲಿದೆ ಎಂದು ತಿಳಿಸಿದರು.
ಚಾತುರ್ಮಾಸ್ಯಕ್ಕೆ ಕೂರುವ ಮೊದಲು ಗೃಹಸ್ಥರು ಹಾಗೂ ಯತಿಗಳು ತಪ್ತ ಮುದ್ರಾಧಾರಣೆ ಮಾಡಿಸಿಕೊಳ್ಳಬೇಕು. ಅನಾನುಕೂಲವಾದವರು ಏಕಾದಶಿ ದಿನದ ಹೊರತಾಗಿಯೂ ಮುದ್ರಾ ಧಾರಣೆ ಮಾಡಿಸಿಕೊಳ್ಳಬಹುದು ಎಂದು ಶ್ರೀಗಳು ಹೇಳಿದರು
ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಶ್ರೀವತ್ಸ ಅವರು ಮಾತನಾಡಿ,
ಬೆಳಿಗ್ಗಿನಿಂದಲೇ ಮಠಕ್ಕೆ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ತಪ್ತ ಮುದ್ರೆಯನ್ನು ಹಾಕಿಸಿಕೊಳ್ಳುತ್ತಾರೆ. ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದಾ , ಪದ್ಮ ಚಿಹ್ನೆಯನ್ನು ಎದೆಯ ಭಾಗ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ ಎಂದು ಹೇಳಿದರು
ಮುದ್ರ ಧಾರಣೆಗೂ ಮುನ್ನ ಮಠದಲ್ಲಿ
ಸುದರ್ಶನ ಹೋಮ ನೆರೆವೇರಿಸಲಾಯಿತು
ಈ ಸಂದರ್ಭದಲ್ಲಿ ಶ್ರೀಕೃಷ್ಣ ಮಿತ್ರ ಮಂಡಳಿ ಕಾರ್ಯದರ್ಶಿ ರಾಘವೇಂದ್ರ ರಾವ್, ಖಜಾಂಜಿ ಸುರೇಶ್ ರಾವ್, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತ್ರಿ,
ಪಿ ಎಸ್ ಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್, ವಾಸುದೇವ್ ಭಟ್,ಕೃಷ್ಣ ದಾಸ್ ಪುರಾಣಿ, ಸುಬ್ರಹ್ಮಣ್ಯ ತಂತ್ರಿ, ಹಾಗೂ ಸದಸ್ಯರು ಮತ್ತಿತರರು ಹಾಜರಿದ್ದರು.
