ಮೈಸೂರು: ಕರ್ನಾಟಕದಲ್ಲಿ ಕನ್ನಡೇತರರಿಗೆ ಕನ್ನಡವನ್ನು ಕಲಿಸಿದಾಗ ಕರ್ನಾಟಕ ರಾಜ್ಯೋತ್ಸವವನ್ನು ಆಚರಣೆ ಮಾಡಿದ್ದಕ್ಕೆ ಒಂದು ಅರ್ಥ ಸಿಗುತ್ತದೆ ಎಂದು
ಆದಿಚುಂಚನಗಿರಿ ಒಕ್ಕಲಿಗ ಮಹಿಳಾ ಸಮಾಜ ಅಧ್ಯಕ್ಷೆ ಸವಿತಾ ಗೌಡ ತಿಳಿಸಿದರು.
ಆದಿಚುಂಚನಗಿರಿ ಒಕ್ಕಲಿಗ ಮಹಿಳಾ ಸಮಾಜ ಕುವೆಂಪು ನಗರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಿದ ವೇಳೆ ಅವರು ಮಾತನಾಡಿದರು.
ಕನ್ನಡ ಭಾಷೆಯನ್ನು ಮಾತನಾಡಿದರೆ ಮಾತ್ರ ಸಾಲದು ಅದನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದು. ಮನೆಯಲ್ಲಿ ಮಕ್ಕಳಿಗೆ ಆಂಗ್ಲ ಭಾಷೆಯನ್ನು ಕಲಿಸಿದರು ಕೂಡ ಕನ್ನಡದಲ್ಲಿ ಮಾತನಾಡುವ ಮೂಲಕ ನಮ್ಮ ಪರಂಪರೆ, ಕನ್ನಡದ ಸಂಸ್ಕೃತಿಯನ್ನು ತಿಳಿಸಬೇಕೆಂದು ಸಲಹೆ ನೀಡಿದರು.
ಪ್ರತಿಯೊಂದು ಮನೆಯಲ್ಲಿ ಮಕ್ಕಳ ಮನಸ್ಸಿನ ಮೇಲೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸುವುದು ತಾಯಂದಿರಾದ ನಮ್ಮ ಕರ್ತವ್ಯ ಎಂದು ತಿಳಿಸಿದರು.
ಸಭೆಯಲ್ಲಿ ಪದಾಧಿಕಾರಿಗಳಾದ ಸರಸ್ವತಿ, ಸವಿತಾ ಜಗದೀಶ್ , ರಾಧಾಕೃಷ್ಣ ಶೈಲಜಾ ಪೂರ್ಣಿಮಾ ನಾಗರಾಜ್, ಶಾರದ, ಸರೋಜಾ, ಸವಿತಾ ಮತ್ತಿತರರು ಉಪಸ್ಥಿತರಿದ್ದರು.

