ಮಡಿಕೇರಿ: ಮಕ್ಕಳಿಗೆ ತಿದ್ದಿ ಬುದ್ದಿ ಹೇಳಬೇಕಾದ ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೇಯ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.
ಚೇರಂಬಾಣೆ ನಿವಾಸಿ, ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ.ಯು. ರೋಹಿಣಿ(51)ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ.
ಮಾನಸಿಕ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದ ಶಿಕ್ಷಕಿ ಚೇರಂಬಾಣೆಯಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ.
ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಮುಂಜಾನೆ 5 ಗಂಟೆ ವೇಳೆಗೆ ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಅವರು ಮೃತಪಟ್ಟಿದ್ದಾರೆ.
ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
