ಮೈಸೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಮೈಸೂರಿನ ಕರುಣೆ ಸೇವಾ ಟ್ರಸ್ಟ್ ವತಿಯಿಂದ ಗೌರವ ಸಮರ್ಪಣ ಕಾರ್ಯಕ್ರಮ ಆಯೋಜಿಸಲಾಯಿತು.
ಟ್ರಸ್ಟ್ ಅಧ್ಯಕ್ಷೆ ರುಕ್ಮಿಣಿ, ಪುನೀತ್ ರಾಜಕುಮಾರ್ ಸೇವಾ ಟ್ರಸ್ಟ್ ನ ರಾಧಾ ಹಾಗೂ ಅಥರ್ವ ಲೈಫ್ ಫೌಂಡೇಶನ್ ಸಿಇಒ ಪುಷ್ಪಲತಾ ಅವರ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.
ಮಹಾದೇವಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ
ಕಾರ್ಯಕ್ರಮ ಹಮ್ಮಿಕೊಂಡು ಇಲ್ಲಿನ ಎಲ್ಲಾ ಶಿಕ್ಷಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.
ಮುಖ್ಯ ಶಿಕ್ಷಕಿ ಕೆ.ಆರ್. ಶಾರದ ಹಾಗೂ ಶಿಕ್ಷಕರಾದ ಶ್ರೀನಿವಾಸ್, ರವಿಪ್ರಕಾಶ್, ಸುಮಾ, ಭಾರತೀ ಮತ್ತು ಕರುಣೆ ಅವರಿಗೆ ವಿಶೇಷವಾಗಿ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸುಪ್ರೀಂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರೂ ಸಮಾಜಸೇವಕರೂ ಆದ ಶ್ರೀನಿವಾಸ್ ಅವರು ಭಾಗವಹಿಸಿದ್ದರು. ಶಾಲೆಯ ಮಕ್ಕಳು ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.