ಯಳಂದೂರು: ಯಳಂದೂರು ಪಟ್ಟಣದ ಎಸ್ಡಿವಿಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಯಿತು.
ಮುಖ್ಯ ಶಿಕ್ಷಕರಾದ ದೀಪ ಅವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿ ಬಾಪುಲೆ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ವೇಳಡ ಮಾತನಾಡಿದ ಅವರು ಶಿಕ್ಷಕರದ್ದು ಪವಿತ್ರ ವೃತ್ತಿಯಾಗಿದ್ದು, ಶಿಕ್ಷಕರು ನಿರಂತರ ಕಲಿಕಾರ್ಥಿಯಾಗಿ ಪ್ರಚಲಿತ ವಿದ್ಯಮಾನಗಳಿಗೆ ಪೂರಕವಾದ ಶಿಕ್ಷಣವನ್ನು ನೀಡಬೇಕು ಎಂದು ಸಲಹೆ ನೀಡಿದರು.
ಹೆಚ್ಚು ಹೆಚ್ಚು ಅಧ್ಯಯನಶೀಲರಾಗುವ ಮೂಲಕ ಉತ್ತಮ ವಿಷಯಗಳೊಂದಿಗೆ ಮೌಲ್ಯಯುತವಾದ ಜೀವನಶೈಲಿಯನ್ನು ರೂಪಿಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಪ್ರತಿಯೊಬ್ಬ ಶಿಕ್ಷಕರು ಕಾರಣಭೂತರಾಗಿದ್ದು, ರಾಷ್ಟ್ರಮಟ್ಟದಲ್ಲಿ 1962ರಿಂದ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಶಿಕ್ಷಣಕ್ಕೆ ಅವಿರತವಾಗಿ ಶ್ರಮಿಸಿದ ಸಾವಿತ್ರಿ ಬಾಪುಲೆ ಅವರ ಆದರ್ಶ ಚಿಂತನೆಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆರಗು ನೀಡಿದವು.
ಮೊದಲಿಗೆ ವಿದ್ಯಾರ್ಥಿಗಳು ಶಾಲಾ ಮುಂಭಾಗದಿಂದ ಬ್ಯಾಂಡ್ ಸೆಟ್ ಬಾರಿಸುವ ಮೂಲಕ ಎಲ್ಲಾ ಶಿಕ್ಷಕರಿಗೆ ಹೂ ಗುಚ್ಛ ನೀಡಿ ಸ್ವಾಗತಿಸಿದರು.
ಕ್ರೀಡಾಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ನೀಡಲಾಯಿತು.
ಎಲ್ಲಾ ಶಿಕ್ಷಕರಿಗೂ ವಿದ್ಯಾರ್ಥಿಗಳು ಗಿಡಗಳನ್ನು ನೀಡುವ ಮೂಲಕ ಶಿಕ್ಷಣ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ ಶುಭ ಕೋರಿದರು.
ಪೋಷಕ ಪ್ರತಿನಿಧಿ ಶ್ರುತಿ, ಶಿಕ್ಷಕರಾದ ವೀರಭದ್ರ ಸ್ವಾಮಿ, ಗುಂಬಳ್ಳಿ ಬಸವರಾಜು, ನಂದಿನಿ, ಮಹದೇವ, ಕವಿತಾ, ರಂಜಿತಾ,ಪಲ್ಲವಿ, ರೂಪ,ಮಂಜುನಾಥ್, ರಾಜಶೇಖರ್, ವಿನಯ್, ಸೇರಿದಂತೆ ಇತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
