ಮೈಸೂರು: ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಖಂಡಿಸಿ ಮೈಸೂರಿನಲ್ಲಿ ಮುಸ್ಲಿಮರು ಧಾರ್ಮಿಕ ಗುರುಗಳ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಿದರು.

ಪಾಕಿಸ್ತಾನಕ್ಕೆ ಮುರ್ದಾಬಾದ್ ಕೂಗಿ ಆಕ್ರೋಶ ವ್ಯಕ್ತಪಡಿಸಿ,ಹಿಂದೂಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದರು.
ಮೈಸೂರಿನ ಮಿಲಾದ್ ಪಾರ್ಕ್ ಬಳಿಯಿಂದ ಶಾಂತಿ ಮೆರವಣಿಗೆ ಸಾಗಿತು.
ಮೊಂಬತ್ತಿ ಹಿಡಿದು ಮೃತರ ಆತ್ಮಕ್ಕೆ ಶಾಂತಿ ಕೋರಿದರು.ಮೆರವಣಿಗೆಯಲ್ಲಿ ನೂರಾರು ಜನರು

ಭಾಗಿಯಾಗಿದ್ದರು.ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಈ ವೇಳೆ ಪೊಲೀಸ್ ಅಧಿಕಾರಿಗಳು ಶಾಂತಿಯುತವಾಗಿ ಮೆರವಣಿಗೆ ಮಾಡಿ ಎಂದು ಪ್ರತಿಭಟನಾ ನಿರತರಿಗೆ ತಿಳಿಹೇಳಿದರು.
