ಮೈಸೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಸಿರುವುದನ್ನು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಎಚ್ ಎನ್ ಶ್ರೀಧರರ್ಮೂರ್ತಿ ಖಂಡಿಸಿದ್ದಾರೆ.
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದಾಗಿ
ಸುಮಾರು 28 ಕ್ಕೂ ಹೆಚ್ಚು ಅಮಾಯಕರು ಬಲಿಯಾಗಿದ್ದು ಇದು ಅತ್ಯಂತ ನೋವಿನ ಸಂಗತಿಯಾಗಿದೆ. ಇದೊಂದು ಪೈಶಾಚಿಕ ಕೃತ್ಯವಾಗಿದ್ದು ದಾಳಿಕೊರ ಉಗ್ರರಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದಿಟ್ಟ ಕ್ರಮ ತೆಗೆದುಕೊಳ್ಳಬೇಕು ಪ್ರವಾಸ ಹಾಗೂ ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಕಾಶ್ಮೀರಕ್ಕೆ ತೆರಳಿರುವ ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಘೋರ ಅಪರಾಧ ಎಂದು ಅವರು ಹೇಳಿದ್ದಾರೆ.
ಪ್ರವಾಸಿಗರು ಮಾಡಿದ ತಪ್ಪಾದರೂ ಏನು, ಜೀವಗಳಿಗೆ ಬೆಲೆ ಇಲ್ಲವೇ?, ಉಗ್ರರ ನಡೆ ಇಡಿ ಮನುಕುಲವೇ ತಲೆ ತಗ್ಗಿಸುವಂತದ್ದಾಗಿದೆ. ವಿನಾಕಾರಣ ಸಾವನ್ನಪ್ಪಿದ ಹಿಂದುಗಳ ಆತ್ಮಕ್ಕೆ ಶಾಂತಿ ಸಿಗಲಿ ಆ ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ
ಎಂದು ಶ್ರೀಧರಮೂರ್ತಿ ಪ್ರಾರ್ಥಿಸಿದ್ದಾರೆ.
ಕೂಡಲೆ ಕೇಂದ್ರ ಸರಕಾರ ಇಂತಹ ಪಾಪಿ ಉಗ್ರರಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ