ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ವ್ಯಾಪ್ತಿಯಲ್ಲಿ ಆಗಾಗ್ಗೆ ಶ್ರೀಗಂಧದ ಮರಗಳು ಕಳ್ಳತನವಾಗುತ್ತಿದ್ದುದನ್ನು ಬೇಧಿಸಿದ ಪೊಲೀಸರು ಮೂವರನ್ನು ಬಂಧಿಸಿ 5 ಲಕ್ಷ ರೂ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆ, ನಗರ ಪೊಲೀಸ್ ಠಾಣೆ ಹಾಗೂ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿದ್ದವು.
ಈ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚಲು ಚಿಕ್ಕಮಗಳೂರು ಜಿಲ್ಲೆ ಪೊಲೀಸ್ ಅಧೀಕ್ಷಕರಾದ ಜಿತೇಂದ್ರ ಕುಮಾರ್ ದಯಾಮ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿ.ಟಿ, ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪಾಧೀಕ್ಷಕರಾದ
ನಾಗರಾಜು,ಎ.ಆರ್,ಮತ್ತು ವಿಜಯ್ ಕುಮಾರ್ ಬಿರಾದಾರ್ ಸಿಪಿಐ ಬಸವನಹಳ್ಳಿ ವೃತ್ತ ಬಸವನಹಳ್ಳಿ ಠಾಣೆಯ ಪಿಎಸ್ಐ ಕೀರ್ತಿ ಕುಮಾರ್ ಹಾಗೂ ಅಜರುದ್ದೀನ್ ಸಿಬ್ಬಂದಿಗಳಾದ ರವೀಂದ್ರ, ಲಿಂಗಮೂರ್ತಿ, ಮಧುಸೂಧನ್ ಅವರುಗಳನ್ನು ಒಳಗೊಂಡ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು.
ಈ ತಂಡವು ವಿವಿಧ ಆಯಾಮಗಳಲ್ಲಿ ವೈಜ್ಞಾನಿಕವಾಗಿ ತನಿಖೆ ನಡೆಸಿ ಪ್ರಕರಣದ ಆರೋಪಿ ಮತ್ತು ಮಾಲು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು.
ಮಾಹಿತಿಯನ್ನು ಸಂಗ್ರಹಿಸಿ ಆರೋಪಿಗಳಾದ ಕೆಂಪನಹಳ್ಳಿಯ ಆಂಜನೇಯ @ ಅಂಜನಿ (25), ಬಸವನಹಳ್ಳಿಯ
ಸುಬ್ರಮಣ್ಯ(25),ಅರವಿಂದ ನಗರದ
ಸಂಜಯ್( 20) ಬಂಧಿತ ಆರೋಪಿಗಳು.
ಆರೋಪಿಗಳಿಂದ ಬಸವನಹಳ್ಳಿ ಠಾಣಾ ವ್ಯಾಪ್ತಿ, ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಅರಣ್ಯ ಇಲಾಖೆ ಪ್ರಕರಣಕ್ಕೆ ಸಂಬಂದಿಸಿದ ಒಟ್ಟು 93 ಕೆಜಿ ತೂಕದ ಸುಮಾರು 5 ಲಕ್ಷ ರೂ ಮೌಲ್ಯದ ಶ್ರೀಗಂಧವನ್ನು ಹಾಗೂ ಆರೋಪಿಗಳು ಕೃತ್ಯಕ್ಕೆ ಬಳಸಿದ 2 ಲಕ್ಷರೂ ಮೌಲ್ಯದ ಕೆಎ 18 ಇಎನ್ 6681 ಕೆ.ಟಿ.ಎಂ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಕದ್ದಮಾಲನ್ನು ವಶಪಡಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸುವಲ್ಲಿ ಶ್ರಮಿಸಿದ ಸಿಬ್ಬಂದಿಯನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ.
