(ವರದಿ:ಸಿದ್ದರಾಜು,ಕೊಳ್ಳೇಗಾಲ)
ಕೊಳ್ಳೇಗಾಲ/ಚಾಮರಾಜನಗರ: ಅಕ್ಟೋಬರ್ 24 ಮತ್ತು 25 ರಂದು ಚಾಮರಾಜನಗರ ದಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ ಆಯೋಜಿಸಲಾಗಿದೆ.
ಬುದ್ಧನ ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ತಲುಪಿಸು ವುದು, ಸಾಮಾಜಿಕ ಅಸಮಾನತೆಗಳ ವಿರುದ್ಧ ಜಾಗೃತಿ ಮೂಡಿಸುವುದು, ಮಾನವೀಯ ಮೌಲ್ಯಗಳನ್ನು ಬಲಪಡಿಸುವುದು ಹಾಗೂ ಬಹುತ್ವದ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಸಮ್ಮೇಳನದ ಪ್ರಮುಖ ಆಶಯಗಳಾಗಿವೆ.
ಕಳೆದ ಎರಡು ತಿಂಗಳುಗಳಿಂದ ಈ ಮಹಾ ಸಮ್ಮೇಳ ನಕ್ಕೆ ಸಿದ್ದತೆ ನಡೆದಿದ್ದು ಸಮ್ಮೇಳನದ ಹಿನ್ನಲೆ ಯಲ್ಲಿ ಬೌದ್ಧ ಧಮ್ಮ ಪಯಣಕ್ಕೆ ಶಾಸಕರು ಹಾಗೂ ಸಮ್ಮೇಳ ನದ ಆಚರಣಾ ಸಮಿತಿ ಅಧ್ಯಕ್ಷರು ಆದ ಎ.ಆರ್. ಕೃಷ್ಣಮೂರ್ತಿರವರು ನಗರದ ಡಾ.ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬೌದ್ಧ ಬಿಕ್ಕುಗಳು, ಉಪಾಸಕರು ಹಾಗೂ ವಿವಿಧ ಧರ್ಮಧ ಮುಖಂಡರು ಜೊತೆ ಕೊಳ್ಳೇಗಾಲ ದಿಂದ ಚಾಮರಾಜನಗರಕ್ಕೆ ಪಾದಯಾತ್ರೆ ಮೂಲಕ ತೆರೆಳಿದರು
ಅಕ್ಟೋಬರ್ 24 ರಂದು (ನಾಳೆ) ಬೆಳಿಗ್ಗೆ 7 ಗಂಟೆಗೆ ನಗರದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಮುಂಭಾಗದಿಂದ ಧಮ್ಮ ನಡಿಗೆ ಮೆರವಣಿಗೆ ಆರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಚಾಮರಾಜನಗರದಲ್ಲಿ ನಡೆಯಲಿರುವ ಈ ಮಹಾ ಸಮ್ಮೇಳನಕ್ಕೆ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರರಾಜ್ಯಗಳಿಂದಲೂ ಬೌದ್ಧ ಭಿಕ್ಕುಗಳು, ಚಿಂತಕರು, ಸಾಹಿತಿಗಳು, ಕಲಾವಿದರು, ಯುವಜನರು ಮತ್ತು ಬುದ್ಧನ ಅನುಯಾಯಿಗಳು ಆಗಮಿಸುವ ನಿರೀಕ್ಷೆಯಿದೆ.
ಕಳೆದ ವರ್ಷ ಮೈಸೂರಿನಲ್ಲಿ ನಡೆದ ಮೊದಲ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ಯಶಸ್ವಿ ಯಾಗಿದ್ದು, ಈ ಬಾರಿ ಚಾಮರಾಜನಗರದಲ್ಲಿ ಎರಡನೇ ಸಮ್ಮೇಳನ ನಡೆಯುತ್ತಿದೆ. ಸಮ್ಮೇಳನದಲ್ಲಿ ವಿಚಾರ ಗೋಷ್ಠಿಗಳು, ಸಂವಾದಗಳು, ಧಮ್ಮ ಕವಿಗೋಷ್ಠಿ, ಮಕ್ಕಳ ಮೈತ್ರಿ ಕಾರ್ಯಕ್ರಮ, ಮಹಿಳಾ ದುಂಡು ಮೇಜಿನ ಸಭೆ, ಯುವ ದುಂಡುಮೇಜಿನ ಸಭೆ ಹಾಗೂ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯಲಿವೆ. ಸಮ್ಮೇಳನದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ.
ಕೊಲಂಬೊ ವಿಶ್ವವಿದ್ಯಾಲಯದ ಶೀಲವಂತ ಮಹಾಥೇರೋ ಬಂತೇಜಿ ಹಾಗೂ ಟಿ.ನರಸೀಪುರದ ನಳಂದ ಬೌದ್ಧ ವಿಹಾರದ ಬೋಧಿರತ್ನ ಬಂತೇಜಿ ದೀಪ ಬೆಳಗಿಸಲಿದ್ದಾರೆ. ಮನೋರಖ್ಖಿತ ಬಂತೇಜಿ ಧಮ್ಮ ಧ್ವಜಾರೋಹಣ ನೆರವೇರಿಸಲಿದ್ದಾರೆ.
ನಗರದ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 11.30 ಕ್ಕೆ ನಡೆಯಲಿರುವ ಸಮ್ಮೇಳನವನ್ನು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.
ಅಂದು ಸಂಜೆ 4 ಗಂಟೆಗೆ ‘ಬುದ್ಧ ಮತ್ತು ಬಹುತ್ವ’ ವಿಷಯದ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನದ ಗೌರವಾಧ್ಯಕ್ಷ ಮನೋರಖ್ಖಿತ ಬಂತೇಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮೈಸೂರಿನ ಕುಂದೂರು ಮಠದ ಶರತ್ಚಂದ್ರ ಸ್ವಾಮೀಜಿ ಹಾಗೂ ಮೈಸೂರಿನ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.
ಬೌದ್ಧ ಧಮ್ಮದ ತತ್ವಗಳು, ಸಮಾನತೆ, ಕರುಣೆ, ಮಾನವೀಯತೆ, ಸಾಮಾಜಿಕ ನ್ಯಾಯ ಹಾಗೂ ವಿವಿಧ ಸಮುದಾಯಗಳ ನಡುವಿನ ಸಹಬಾಳ್ವೆಯ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.
ಅಕ್ಟೋಬರ್ 25 ರಂದು ಬೆಳಿಗ್ಗೆ 11.30 ಕ್ಕೆ ನಡೆಯುವ ಎರಡನೇ ದಿನದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಸಚಿವರು, ಶಾಸಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಬುದ್ಧಪ್ರಜ್ಞೆ ವೇದಿಕೆಯಲ್ಲಿ ಯುವ ದುಂಡುಮೇಜಿನ ಸಭೆ ನಡೆಯಲಿದೆ. ಯುವಜನರಲ್ಲಿ ಬುದ್ಧನ ಚಿಂತನೆ, ಸಾಮಾಜಿಕ ಜವಾಬ್ದಾರಿ, ಸಮಾನತೆ ಮತ್ತು ಮೈತ್ರಿಭಾವ ಬೆಳೆಸುವ ನಿಟ್ಟಿನಲ್ಲಿ ಸಂವಾದಗಳು ನಡೆಯಲಿವೆ.
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವಿವಿಧ ಕಲಾತಂಡಗಳು ಸಮ್ಮೇಳನದಲ್ಲಿ ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿವೆ. ಧಮ್ಮ ಕವಿಗೋಷ್ಠಿ, ಮಕ್ಕಳ ಮೈತ್ರಿ ಕಾರ್ಯಕ್ರಮ ಹಾಗೂ ಮಹಿಳಾ ದುಂಡುಮೇಜಿನ ಸಭೆಗಳೂ ಸಮ್ಮೇಳನದ ಪ್ರಮುಖ ಆಕರ್ಷಣೆಗಳಾಗಿವೆ.
ಅಕ್ಟೋಬರ್ 25 ರಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
