ಮೈಸೂರು: ಕ್ಷೇಮ ಧಾಮ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ವತಿಯಿಂದ ಪ್ಲಾಸ್ಟಿಕ್ ನಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ಬಿಡಿ ಬಟ್ಟೆ ಬ್ಯಾಗ್ ಬಳಸಿ ಜಾಗೃತಿ ಕಾರ್ಯಕ್ರಮವನ್ನು ನಾಳೆ ಹಮ್ಮಿಕೊಳ್ಳಲಾಗಿದೆ.
ಮೈಸೂರಿನ ಶಿವರಾಂಪುರ 2ನೇ ಹಂತದಲ್ಲಿರುವ ಬಿಎಸ್ಎನ್ಎಲ್ ಆರ್ಚ್
ಹತ್ತಿರ ಮೇ 7ರಂದು ಬೆಳಗ್ಗೆ 8 ಗಂಟೆಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅರಿವು ಸಂಸ್ಥೆಯ ಅಧ್ಯಕ್ಷರಾದ
ಶ್ರೀಕಾಂತ್ ಕಶ್ಯಪ್ ತಿಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ
ಶಾಸಕರಾದ ಟಿ ಎಸ್ ಶ್ರೀವತ್ಸ,ಕ್ಷೇಮ ಧಾಮ ಟ್ರಸ್ಟ್ ಅಧ್ಯಕ್ಷರಾದ ಎಚ್ ವಿ ಎಲ್ ಏನ್ ಆಚಾರ್,ಕೆ ಎಮ್ ಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್,ಅರಿವು ಸಂಸ್ಥೆ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್ ಹಾಗೂ ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
