ಮೈಸೂರು: ಕಾವೇರಿ ನ್ಯಾಯ ಮಂಡಳಿ ಆದೇಶ ವಿರೋಧಿಸಿ ನಾಳೆ ಬೆಳಿಗ್ಗೆ 11.30ಕ್ಕೆ ಮೈಸೂರಿನ ಟೌನ್ ಹಾಲ್ ಮುಂಭಾಗ ಕಾವೇರಿ ಕ್ರಿಯಾ ಸಮಿತಿ ಸದಸ್ಯರು ಧರಣಿ ಹಮ್ಮಿಕೊಂಡಿದ್ದಾರೆ.
ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷರಾದ ಎಸ್ ಜಯಪ್ರಕಾಶ್ ಅವರ ನೇತೃತ್ವದಲ್ಲಿ ಇಂದು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಇಂದಿನ ಕಾವೇರಿ ನ್ಯಾಯ ಮಂಡಳಿ ಆದೇಶ ವಿರೋಧಿಸಿ ಎಂದಿನಂತೆ ನಾಳೆಯಿಂದ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಲಾಯಿತು.
ನಾಳೆ ಬೆಳಿಗ್ಗೆ 11.30 ಕ್ಕೆ ಮೈಸೂರಿನ ಟೌನ್ ಹಾಲ್ ಮುಂಭಾಗ ಕಾವೇರಿ ಕ್ರಿಯಾ ಸಮಿತಿ ವೇದಿಕೆಯಲ್ಲಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಮೂಗೂರು ನಂಜುಂಡಸ್ವಾಮಿ, ಸುರೇಶ್ ಗೌಡ, ತೇಜೇಶ್ ಲೋಕೇಶ್ ಗೌಡ , ಸಿಂದುವಳ್ಳಿ ಶಿವಕುಮಾರ್, ಸಂತೋಷ, ಶಾಂತರಾಜೇಅರಸ್, ಮಹೇಶ್, ಪ್ರದೀಪ್ ಕುಮಾರ್ ನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
