ಮೈಸೂರು: ಶ್ರೀ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರು ಶ್ರೀ ಬಾಲ ಮಂಜುನಾಥಸ್ವಾಮಿಗಳಿಗೆ ಶ್ರೀ ವಿದ್ಯಾನಂದ ಸ್ವಾಮಿಗಳೆಂಬ ನಾಮವನ್ನು ಅನುಗ್ರಹಿಸಿದ ಸ್ಮರಣಾರ್ಥ ಕನ್ನಡಾಂಬೆ ರಕ್ಷಣಾ ವೇದಿಕೆ
ನಾಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಫೆ.5 ರಂದು ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಮೈಸೂರಿನ ಹೂಟಗಳ್ಳಿ, ವಾಟರ್ ಟ್ಯಾಂಕ್ ಮುಖ್ಯರಸ್ತೆಯಲ್ಲಿರುವ ಕನ್ನಡಾಂಬೆ ರಕ್ಷಣಾ ವೇದಿಕೆ ಕಚೇರಿ ಎದುರು ಸುಮಾರು 500 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್ ಮತ್ತು ಶಿಕ್ಷಣ ಸಾಮಾಗ್ರಿಗಳ ವಿತರಣೆ ಮಾಡಲಾಗುತ್ತದೆ.
ನಂತರ ಅನ್ನ ಸಂತರ್ಪಣೆ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ
ದಿನಸಿ ಪದಾರ್ಥಗಳ ವಿತರಣೆ, ಉಚಿತ ಆರೋಗ್ಯ ತಪಸಣೆ,ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು
ಕನ್ನಡಾಂಬೆ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಬಿ.ರಾಜಶೇಖರ್ ತಿಳಿಸಿದ್ದಾರೆ.
