ನಾಳೆ ನೈಋತ್ಯ ಪ್ರದೇಶದ ಪ್ರಾದೇಶಿಕ ಅಧಿಕೃತ ಭಾಷಾ ಸಮ್ಮೇಳನ

Spread the love

ಮೈಸೂರು: ಜನವರಿ 4‌ರಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬೆಳಿಗ್ಗೆ 9 ಗಂಟೆಗೆ ಅಧಿಕೃತ ಭಾಷಾ ಇಲಾಖೆಯು ದಕ್ಷಿಣ ಮತ್ತು ನೈಋತ್ಯ ಪ್ರದೇಶದ ಪ್ರಾದೇಶಿಕ ಅಧಿಕೃತ ಭಾಷಾ ಸಮ್ಮೇಳನವನ್ನು ಆಯೋಜಿಸಿದೆ.

ನಾಳೆ ನಡೆಯಲಿರುವ ಸಮ್ಮೇಳನವು ದಕ್ಷಿಣ ಮತ್ತು ನೈಋತ್ಯ ಪ್ರದೇಶಗಳ ಜಂಟಿ ಪ್ರಾದೇಶಿಕ ಅಧಿಕೃತ ಭಾಷಾ ಸಮ್ಮೇಳನವಾಗಿದೆ. ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಇದರಲ್ಲಿ ಭಾಗವಹಿಸಲಿದ್ದು ಮುಖ್ಯ ಅತಿಥಿಯಾಗಿ ಬಿಹಾರದ ನೂತನ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಭಾಗವಹಿಸಲಿದ್ದಾರೆ ಎಂದು ‌ಸುದ್ದಿಗೋಷ್ಠಿಯಲ್ಲಿ ಅಧಿಕೃತ ಭಾಷಾ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಅವರು ಕೂಡ ಆಗಮಿಸಲಿದ್ದಾರೆ. ದಕ್ಷಿಣ ಮತ್ತು ನೈಋತ್ಯ ಪ್ರದೇಶಗಳಲ್ಲಿ ನೆಲೆಗೊಂಡಿರುವ ವಿವಿಧ ಬ್ಯಾಂಕ್‌ಗಳು,ಉದ್ಯಮಗಳು,ಕಚೇರಿಗಳು ಅಧಿಕೃತ ಭಾಷೆಯ ಅನುಷ್ಠಾನಕ್ಕಾಗಿ ಮಾಡಿದ ಅತ್ಯುತ್ತಮ ಕೆಲಸಗಳಿಗಾಗಿ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಹೇಳಿದರು.

ಮಾಹಿತಿ ನಿರ್ವಹಣಾ ವ್ಯವಸ್ಥೆಯ ಮೂಲಕ ಪಡೆದ ತ್ರೈಮಾಸಿಕ ಪ್ರಗತಿ ವರದಿಗಳ ಆಧಾರದ ಮೇಲೆ ಈ ಪ್ರಶಸ್ತಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಾಳೆ ಪ್ರಶಸ್ತಿ ವಿಜೇತರಿಗೆ ದಕ್ಷಿಣ ಮತ್ತು ನೈಋತ್ಯ ಪ್ರದೇಶಗಳಲ್ಲಿ ಅಧಿಕೃತ ಭಾಷಾ ಕ್ಷೇತ್ರದಲ್ಲಿ ಅವರ ಅತ್ಯುತ್ತಮ ಕೆಲಸಕ್ಕಾಗಿ ಪ್ರಮಾಣಪತ್ರಗಳನ್ನು ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದರು.