ಪಾಲಕ್ಕಾಡ್: ರೈಲು ಹರಿದು ನಾಲ್ಕು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
ಶೊರನೂರ್ ರೈಲ್ವೆ ಸ್ಟೇಷನ್ ಬಳಿ ಕೇರಳ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಾರ್ಮಿಕರು ರೈಲ್ವೆ ಟ್ರ್ಯಾಕ್ ಮೇಲೆ ಬಿದ್ದಿದ್ದ ಕಸವನ್ನು ಸ್ವಚ್ಛಗೊಳಿಸುತ್ತಿದ್ದಾಗ ಏಕಾಏಕಿ ರೈಲು ಆಗಮಿಸಿದೆ.
ಈ ವೇಳೆ ರೈಲು ಕಾರ್ಮಿಕರ ಮೇಲೆ ಹರಿದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ,ಮುಂದಿನ ಕ್ರಮ ಕೈಗೊಂಡಿದ್ದಾರೆ.
ತಮಿಳುನಾಡಿನ ವಾಲಿ,ರಾಣಿ,ಲಕ್ಷ್ಮಣ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು,ಮತ್ತೊಬ್ಬರ ದೇಹ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.