ಮೈಸೂರು: ಮೈಸೂರನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು, ಸಿಬ್ಬಂದಿಗಳು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಒ ಗಾಯತ್ರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಮ್ಮಿಕೊಂಡಿದ್ದ ಆರೋಗ್ಯದ ಬಗ್ಗೆ ಇರಲಿ ಗಮನ ಟಿ ಬಿ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯನ್ನು ಕ್ಷಯ ರೋಗ ಮುಕ್ತ ಮಾಡಲು 100 ದಿನಗಳ ಕಾಲ ಕ್ಷಯ ರೋಗ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಕ್ಷಯ ಪೋರ್ಟಲ್ ನಲ್ಲಿ ಕ್ಷಯ ರೋಗಿಗಳನ್ನು ಅಡಾಪ್ಟ್ ಮಾಡಿಕೊಳ್ಳಲು ಅವಕಾಶ ಇದೆ. ಈ ರೋಗಿಗಳ ಔಷಧಿಗಳನ್ನು ನೀಡಲು ಕಡಿಮೆ ಮೊತ್ತದ ಹಣವನ್ನು ಒದಗಿಸಬಹುದು ಯಾರು ಬೇಕಾದರೂ ಅಡಾಪ್ಟ್ ಮಾಡಿಕೊಳ್ಳಬಹುದು ಎಂದು ತಿಳಿಸಿದರು.
ಮೂರು ನಾಲ್ಕು ವಾರ ಗಳಿಗೂ ಹೆಚ್ಚು ಕೆಮ್ಮು ಇದ್ದರೆ ಅದು ಕ್ಷಯ ಆಗಿರಬಹುದು ಆದ್ದರಿಂದ ಪರೀಕ್ಷೆ ಮಾಡಿಸಿಕೊಳ್ಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುವುದು,ಪತ್ತೆ ಹಚ್ಚಿದವರಿಗೆ 500 ರೂಗಳ ಪ್ರೋತ್ಸಾಹ ಧನ ನೀಡಲಾಗುವುದು. ಗ್ರಾಮಿಣ ಪದೇಶದಲ್ಲಿ ಹೆಚ್ಚಿನ ಪರೀಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಹೆಚ್ಚು ಕಾರ್ಯ ನಿರ್ವಹಿಸಬೇಕು ಎಂದು ಗಾಯಿತ್ರಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ ಅವರು ಮಾತನಾಡಿ, ಕ್ಷಯ ರೋಗ ಅಂಟು ರೋಗ,ಈ ರೋಗಕ್ಕೆ ಚಿಕಿತ್ಸೆ ನೀಡುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬದಿಗಳಿಗೆ ಧನ್ಯವಾದಗಳು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪಿ ಸಿ ಕುಮಾರಸ್ವಾಮಿ ಅವರು ಮಾತನಾಡಿ ಇಂದಿನಿಂದ 100 ದಿನಗಳ ಕಾಲ ಟಿ ಬಿ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದೆ, ಮುಂದಿನ 100 ದಿನಗಳ ಕಾಲ ವಿವಿಧ ಇಲಾಖೆಗಳ ಸಮನ್ವಯ ದೊಂದಿಗೆ ಟಿ ಬಿ ಯನ್ನು ಕಡಿಮೆ ಮಾಡಲು ಗ್ರಾಮಗಳಿಗೆ ಭೇಟಿ ನೀಡಿ ಸರ್ವೇ ಮಾಡಿ,ಯಾವ ಗ್ರಾಮಗಳಲ್ಲಿ ಯಾವ ಏರಿಯಾಗಳಲ್ಲಿ ಕ್ಷಯ ರೋಗ ಇದೆ ಎಂಬುದನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಭಾಗೀಯ ಸಹ ನಿರ್ದೇಶಕ ಡಾ. ಕೆ ಹೆಚ್ ಪ್ರಸಾದ್,ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಜಯಂತ್ ಎಂ ಎಸ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ. ಬೃಂದಾ ಮತ್ತಿತರ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.