ಮೈಸೂರು: ಕ್ರಿಕೆಟ್ ಆಡುವ ಸಂದರ್ಭದಲ್ಲಿ ಶುರುವಾದ ವಾಗ್ವಾದ ಗಲಾಟೆಗೆ ತಿರುಗಿ, ಒಂದೇ ಸಮುದಾಯದ ಎರಡು ಕುಟುಂಬದವರು ಮಾರಕಾಸ್ತ್ರಗಳಿಂದ ಹೊಡೆದಾಡಿ ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವ್ ನಗರ 2ನೇ ಹಂತದ ಅಬುಜರ್ ಮಸೀದಿ ಸಮೀಪದ ಪಾರ್ಕ್ ನಲ್ಲಿ ಈ ಘಟನೆ ನಡೆದಿದೆ.
ರೌಡಿ ಶೀಟರ್ ಉದಯಗಿರಿಯ ಶಕಿಬುಲ್ ರೆಹಮಾನ್ ಆಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ನಡುವೆ ಗಲಾಟೆ ನಡೆದಿದೆ,ಈ ವೇಳೆ ಇಬ್ಬರಿಗೆ ಗಾಯಗಳಾಗಿವೆ.
ಗಲಾಟೆ ದೃಶ್ಯಾವಳಿ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿವೆ. ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದು, ಒಟ್ಟು 6 ಆರೋಪಿಗಳನ್ನು ಬಂಧಿಸಿ,ಮುಂದಿನ ಕ್ರಮ ಕೈಗೊಳ್ಳಲಾಗಿದೆ.
