ಕಲಬುರಗಿ: ಕಲಬುರಗಿ ಕಾರಾಗೃಹದಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ.
ಕರ್ತವ್ಯಲೋಪ ಆರೋಪದಡಿ ಇಬ್ಬರು ಜೈಲರ್ ಗಳಾದ ಸೈನಾಜ್ ನಿಗೆವಾನ್, ಪಾಂಡುರಂಗ ಹರವಾಳ ಅವರನ್ನು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ
ಎಂದು ಕಲಬುರಗಿ ಜೈಲಿನ ಮುಖ್ಯ ಅಧೀಕ್ಷಕಿ ಡಾ.ಅನಿತಾ ತಿಳಿಸಿದ್ದಾರೆ.
ಕಲಬುರಗಿ ಜೈಲಿನಲ್ಲಿ ಕೈದಿಗಳಿಗೆ ಗಾಂಜಾ, ಮದ್ಯ, ಮೊಬೈಲ್ ಸೇರಿದಂತೆ ವಿವಿಧ ರೀತಿಯ ಸೌಲಭ್ಯಗಳು ನೀಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕರಿಗಳು ಜೈಲಿನ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು.
ಕೈದಿಗಳಿಗೆ ಕೆಲ ಸೌಲಭ್ಯ ಕೊಟ್ಟಿದ್ದು ಸಾಬೀತಾದ ಕಾರಣ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ.