ತಿರುವಣ್ಣಾಮಲೈ: ಹಣ್ಣು ಮಾರಾಟ ಮಾಡಲು ಬಂದಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ತಮಿಳುನಾಡಿನ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶದ 25 ವರ್ಷದ ಮಹಿಳೆ ಹಣ್ಣುಗಳನ್ನು ಮಾರಾಟ ಮಾಡುವ ಸಲುವಾಗಿ ತಮಿಳುನಾಡಿನ ತಿರುವಣ್ಣಾಮಲೈಗೆ ಬಂದಿದ್ದಳು.
ಸಂತ್ರಸ್ತೆ ಮತ್ತು ಆಕೆಯ ತಾಯಿ ತಿರುವಣ್ಣಾಮಲೈಗೆ ಬಂದಿದ್ದು, ತಡರಾತ್ರಿ ಮನೆಗೆ ಮರಳಲು ಇಬ್ಬರೂ ರಸ್ತೆ ಬದಿ ನಿಂತಿದ್ದಾಗ ಗಸ್ತಿನಲ್ಲಿದ್ದ ಕಾನ್ಸ್ ಟೇಬಲ್ ಗಳಾದ ಡಿ. ಸುರೇಶ್ ರಾಜ್ ಮತ್ತು ಪಿ. ಸುಂದರ್ ತಮ್ಮ ವಾಹನ ನಿಲ್ಲಿಸಿ ಅವರನ್ನು ವಿಚಾರಿಸಿದ್ದಾರೆ.
ಅನಂತರ ಮಹಿಳೆಯರನ್ನು ಬಲವಂತವಾಗಿ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಯುವತಿಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಪೊಲೀಸರನ್ನು ಬಂಧಿಸಿ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಕರಾದ ಪೊಲೀಸರೇ ಈ ಕೃತ್ಯ ಎಸಗಿರುವುದು ನಿಜಕ್ಕೂ ಹೇಯ ಪೊಲೀಸ್ ಇಲಾಖೆಗೇ ಕಪ್ಪು ಮಸಿ ಬಳಿದಂತಾಗಿದೆ.