ಉದಯಗಿರಿ ಠಾಣೆ ದಾಳಿ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸಿಪಿ ದಿಢೀರ್ ವರ್ಗಾವಣೆ!

Spread the love

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಯನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು ಚರ್ಚೆಗೆ ಗ್ರಾಸ ಒದಗಿಸಿದೆ‌

ಸೋಮವಾರ ರಾತ್ರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲುತೂರಾಟ ಪ್ರಕರಣದ ತನಿಖಾಧಿಕಾರಿಯಾಗಿದ್ದ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ,ಆದರೆ ಈತನಕ‌ ಅವರಿಗೆ ಬೇರೆ ಸ್ಥಳ ತೋರಿಸಿಲ್ಲ.

ಸಂದೇಶ್ ಕುಮಾರ್ ಅವರ ಜಾಗಕ್ಕೆ( ಸಿಸಿಬಿ ಎಸಿಪಿಯಾಗಿ) ಸಿಐಡಿಯಲ್ಲಿದ್ದ ಮೊಹಮ್ಮದ್ ಶರೀಫ್ ರಾವುತರ್ ಅವರನ್ನು ನೇಮಿಸಲಾಗಿದೆ.

ಮೈಸೂರಿನಲ್ಲಿ ನಡೆದ ಉದಯಗಿರಿ ಠಾಣೆ ಮೇಲಿನ ಕಲ್ಲುತೂರಾಟ ಪ್ರಕರಣದಲ್ಲಿ ಪೊಲೀಸರು ಸಹ ಗಾಯಗೊಂಡಿದ್ದರು. ಈ ಪ್ರಕರಣದ ತನಿಖೆಯನ್ನು ಎಸಿಪಿ ಸಂದೇಶ್ ಕುಮಾರ್ ಅವರು ಕೈಗೊಂಡು ಈವರೆಗೂ ಹಲವರನ್ನು ಬಂಧಿಸಿದ್ದರು.

ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಸಂದೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಶಾಂತಮಲ್ಲಪ್ಪ ವರ್ಗಾವಣೆ: ಮೈಸೂರಿನ ದೇವರಾಜ ಉಪವಿಭಾಗದ ಎಸಿಪಿ ಯಾಗಿದ್ದ ಶಾಂತಮಲ್ಲಪ್ಪ ಅವರನ್ನು ಕೂಡಾ ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ ರಾಜೇಂದ್ರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.