ಮೈಸೂರು: ಮೈಸೂರಿನ ಶ್ರೀ ಕೃಷ್ಣ ಧಾಮದ 50ನೇ ವರ್ಷದ ಸುವರ್ಣ ಸಮಾರಂಭದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠ ಹಾಗೂ ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀಗಳು ಪಾಲ್ಗೊಂಡಿದ್ದರು.
ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿಗಳಾದ ಪೂಜ್ಯ
ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ
ಶ್ರೀಪಾದಂಗಳವರು ಹಾಗೂ ಉಡುಪಿ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ
ಶ್ರೀ 1008 ಶ್ರೀ ವಿಶ್ವಪ್ರಸನ್ನತೀರ್ಥ
ಶ್ರೀಪಾದಂಗಳರವರನ್ನು ಭೇಟಿ ಮಾಡಿ ಶಾಸಕ ಟಿ.ಎಸ್ ಶ್ರೀವತ್ಸ ಅವರು ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ ಪ್ರಕಾಶ್,ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷರಾದ ಕೆ ಆರ್ ಸತ್ಯನಾರಾಯಣ್,ಹಿರಿಯ ಪತ್ರಕರ್ತರಾದ ರವೀಂದ್ರ ಜೋಶಿ,ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ,ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್,ಕಡಕೋಳ ಜಗದೀಶ್, ಟಿ ಎಸ್ ಅರುಣ್,ಕೆ ಎಂ ನಿಶಾಂತ್ ಮತ್ತಿತರರು ಹಾಜರಿದ್ದರು.
