ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳ ತೆರವಿಗೆ ತೇಜಸ್ವಿ ಆಗ್ರಹ

Spread the love

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅನಧಿಕೃತ ಮನೆಗಳನ್ನು ತೆರವು ಮಾಡಬೇಕೆಂದು‌
ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಪವಿತ್ರ ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಅಂದವನ್ನು‌ ಹಾಳು ಮಾಡಬೇಡಿ ಎಂದು ಒತ್ತಾಯಿಸಿದ್ದಾರೆ.

ಬೆಟ್ಟದಲ್ಲಿ ಯಾವುದೇ ಹೊಸ ಮನೆಗಳ ನಿರ್ಮಾಣ ಮಾಡಬಾರದು ಮತ್ತು ಮೊದಲ ಮಹಡಿ ಗಳನ್ನು ಕಟ್ಟಬಾರದು ಈಗಾಗಲೇ ಇರುವ ಮನೆಗಳ ಯಾತಸ್ಥಿತಿ ಕಾಪಾಡುವಂತೆ ಸರ್ಕಾರ ಆದೇಶ ನೀಡಿದ್ದರು ಕೆಲವರು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಕನ್ನಡ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಮಿ ಆರೋಪ ಮಾಡಿದ್ದಾರೆ.

ಕೆಲವರು ಅರಣ್ಯ ಇಲಾಖೆಯ‌ ಗಡಿಯನ್ನು ದಾಟಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಅಂತವರ ಮೇಲೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ಮನೆಗಳ ನಿರ್ಮಾಣ ಕಾರ್ಯ ಸ್ಥಗಿತ ಗೋಳಿಸ ಬೇಕು ಎಂದು ತೇಜಸ್ವಿ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಈಗಾಗಲೇ ಅನೇಕ ಬಾರಿ ಚಾಮುಂಡಿ ಬೆಟ್ಟದಲ್ಲಿ ಕುಸಿತ ಉಂಟಾಗಿದ್ದು ಕಳೆದ ನಾಲ್ಕು ಐದು ವರ್ಷಗಳ ಹಿಂದೆಯೇ ನಂದಿ ರಸ್ತೆ‌ ಕುಸಿತ ವಾಗಿದ್ದರೂ ಈವರೆಗೂ ಕೂಡ ಸರಿಪಡಿಸಿಲ್ಲ.

ಚಾಮುಂಡಿ ಬೆಟ್ಟದಲ್ಲಿ ಕೆಲವರು ಬೆಟ್ಟದ ತುದಿಯಲ್ಲಿಯೂ ಕೂಡ ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ ಮುಂದಿನ ದಿನಗಳಲ್ಲಿ ಇಂತಹಾ ಮನೆಗಳು ಕುಸಿತ ಊಂಟಾಗಿ ಸಾವು ನೋವುಗಳು ಊಂಟಗುವುದರಲ್ಲಿ ಸಂಶಯವೇ ಇಲ್ಲ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಚಾಮುಂಡಿ ಬೆಟ್ಟದಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಇಲಾಖೆಯ‌ ಗಡಿಯನ್ನು ದಾಟಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಮನೆಗಳ ನಿರ್ಮಾಣ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಮನೆಗಳ ನಿರ್ಮಾಣ ಕಾರ್ಯ ಕೂಡಲೇ ಸ್ಥಗಿತ ಗೋಳಿಸಿ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.