ಲಖನೌ: ಉತ್ತರ ಪ್ರದೇಶದ ಕನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಛಾವಣಿ ಕುಸಿದು ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ನಡೆದಿದೆ.
ರಾಜ್ಯ ವಿಪತ್ತು ನಿರ್ವಹಣಾ ತಂಡ, ಪೊಲೀಸರು, ರಕ್ಷಣಾ ಸಿಬ್ಬಂದಿ ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವಲ್ಲಿ ನಿರತರಾಗಿದ್ದಾರೆ. ರಕ್ಷಿಸಲ್ಪಟ್ಟ ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. 23 ಕಾರ್ಮಿಕರನ್ನು ರಕ್ಷಿಸಲಾಗಿದೆ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಸಧ್ಯಕ್ಕೆ ಯಾವುದೇ ಸಾವು ಸಂಭವಿಸಿಲ್ಲ,ಕೆಲವರು ಇನ್ನೂ ಅವಶೇಷಗಳಡಿ ಸಿಲುಕಿದ್ದು ರಕ್ಷಣಾ ಕಾರ್ಯ ಮುಂದುವರಿದಿದೆ.
ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಕನೌಜ್ ರೈಲ್ವೆ ನಿಲ್ದಾಣದಲ್ಲಿ ಹೊಸ ಟರ್ಮಿನಲ್‌ಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಮೇಲ್ಛಾವಣಿ ಕುಸಿದಿದೆ. ಅವಶೇಷಗಳಡಿಯಿಂದ 23 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ. 20 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ, 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಚಿವ ಅಸಿಮ್ ಅರುಣ್ ಮಾಹಿತಿ ನೀಡಿದ್ದಾರೆ.