ಶ್ರೀ ವೈಷ್ಣವ ಸಮಾವೇಶ ಯಶಸ್ವಿಯಾಗಲಿ:ಶುಭ ಕೋರಿದ ಪ್ರೊ. ಡಾ.ಭಾಷ್ಯಂ ಸ್ವಾಮೀಜಿ

Spread the love

ಮೈಸೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಶ್ರೀ ವೈಷ್ಣವ ಬೃಹತ್ ಸಮಾವೇಶ ಯಶಸ್ವಿಯಾಗಲೆಂದು ಮೈಸೂರಿನ ವಿಜಯನಗರದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಹಾರೈಸಿದ್ದಾರೆ.

ಶ್ರೀ ಯತಿರಾಜ ಮಠ ಹಾಗೂ ಅಖಿಲ ಕರ್ನಾಟಕ ಶ್ರೀ ವೈಷ್ಣವ ಮಹಾಸಭಾ ವತಿಯಿಂದ ಇದೇ ಭಾನುವಾರ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಆವರಣದಲ್ಲಿ ಶ್ರೀ ವೈಷ್ಣವ ಬೃಹತ್ ಸಮಾವೇಶ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಪ್ರೊ.ಡಾ.ಭಾಷ್ಯಂ ಸ್ವಾಮೀಜಿಯವರು ಯತಿರಾಜ ಮಠದ ಜಗದ್ಗುರುಗಳಾದ ಶ್ರೀ ಯಧುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್‌ ಅವರನ್ನು ಭೇಟಿಯಾಗಿ ಶುಭಕೋರಿ ಸಮಾವೇಶ ಯಶಸ್ವಿಯಾಗಲಿ ಎಂದು ಹಾರೈಸಿದರು.

ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಉಪಸ್ಥಿತರಿದ್ದರು.