ಮೈಸೂರು: ವಾಜಮಂಗಲ ಗ್ರಾಮದಲ್ಲಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಶೀಘ್ರ ಬಂದಿಸಿ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಿಧಾನ ಪರುಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.
ಇನ್ನು ಮುಂದೆ ಇಂತಹ ಪ್ರಕರಣಗಳು ಜರುಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು.
ಮೈಸೂರು ಜಿಲ್ಲೆ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ವಾಜಮಂಗಲ ಗ್ರಾಮದಲ್ಲಿ ಮೊನ್ನೆ ಗ್ರಾಮದ ಸಮುದಾಯ ಭವನದ ಬಳಿ ಹಾಕಲಾಗಿದ್ದ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಯಾರೋ ಕಿಡಿಗೇಡಿಗಳು ಅಪಮಾನ ಮಾಡಿದ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರೂ ಆಗಿರುವ ಯತೀಂದ್ರ ಸಿದ್ದರಾಮಯ್ಯ ಭೇಟಿ ಪರಿಶೀಲಿಸಿದರು.
ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ನಾಮಫಲಕಕ್ಕೆ ಹೂಮಾಲೆ ಹಾಕಿ ಗೌರವ ಸಲ್ಲಿಸಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆದಷ್ಟು ಬೇಗ ಕಿಡಿಗೇಡಿಗಳನ್ನು ಬಂಧಿಸಿ ಇನ್ನು ಮುಂದೆ ಇಂತಹ ಪ್ರಕರಣಗಳು ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಗ್ರಾಮದ ಮುಖಂಡರು ಘಟನೆಯ ಬಗ್ಗೆ ವಿವರಿಸಿ ಇನ್ನು ಮುಂದೆ ಇಂತಹ ಪ್ರಕರಣಗಳು ಆಗದಂತೆ ನೋಡಿಕೊಳ್ಳಬೇಕಾದರೆ ಈಗ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಡಾಕ್ಟರ್ ಯತೀಂದ್ರ ಸಿದ್ಧರಾಮಯ್ಯ ನವರ ಜೊತೆ ಮಾತನಾಡಿ ಈಗಾಗಲೇ ಘಟನೆಯ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಲಾಗಿದ್ದು ಅಕ್ಕಪಕ್ಕದ ಸಿ ಸಿ ಕ್ಯಾಮೆರಾ ಗಳನ್ನು ಪರಿಶೀಲನೆ ಮಾಡಲಾಗಿದೆ, ಆದಷ್ಟು ಬೇಗ ಕಿಡಿಗೇಡಿಗಳನ್ನು ಬಂದಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಾಕ್ಟರ್ ಬಿ. ಜೆ ವಿಜಯ್ ಕುಮಾರ್, ರಾಜ್ಯ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಮಣ್ಯ, ಕೆ.ಎಸ್ ಶಿವರಾಮು, ಜವರಪ್ಪ, ಕಾಂಗ್ರೆಸ್ ಪಕ್ಷದ ಕಾನೂನು ವಿಭಾಗದ ಎಂಸಿ ಹುಂಡಿ ಶಿವಪ್ರಸಾದ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎಂ ಟಿ ರವಿಕುಮಾರ್ ಮುದ್ರಾಮೇಗೌಡ, ಮಣಿಹಯ್ಯ, ಗ್ರಾಮದ ಮುಖಂಡರು, ತಾಲೂಕು ದಂಡಾಧಿಕಾರಿಗಳಾದ ಮಹೇಶ್ ಕುಮಾರ್, ಹಿರಿಯ ಪೊಲೀಸ್ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಜರಿದ್ದರು.