ಮೈಸೂರು: ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಲಕ್ಷ್ಮಿಪುರಂನಲ್ಲಿರುವ ಶ್ರೀ ದುರ್ಗಾ ಫೌಂಡೇಶನ್ ಕಚೇರಿಯಲ್ಲಿ ವಿಶೇಷ ಪೂಜೆ ಹಾಗೂ ಸೌಹಾರ್ದತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಲಕ್ಷ್ಮಿ ವಿಗ್ರಹವನ್ನು ಭಕ್ತಿಭಾವದಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿ ವರಮಹಾಲಕ್ಷ್ಮಿ ಪೂಜೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು ವಿಶೇಷ.
ಪೂಜೆಯ ನಂತರ ಭಾಗವಹಿಸಿದ್ದವರಿಗೆ ಬಾಗಿನ ವಿತರಿಸಲಾಯಿತು. ಧರ್ಮ, ಜಾತಿ ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಆಚರಿಸುವ ಮೂಲಕ ಪರಸ್ಪರ ಸೌಹಾರ್ದತೆ, ಸಹೋದರತ್ವ ಮತ್ತು ಸಾಮಾಜಿಕ ಏಕತೆಯ ಸಂದೇಶವನ್ನು ಸಾರಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್,
ಕವಿತಾ , ವೀಣಾ, ರಮ್ಯಾ ,ಯಶಸ್ವಿನಿ, ಮುಸಲ್ಮಾನ್ ಬಾಂಧವರಾದ ಅಮ್ರೀನ್, ಫಾತಿಮಾ, ನಜೀರ ಬೇಗಮ್, ಐರಾನ್, ಹಾಗೂ ಪದಾಧಿಕಾರಿಗಳು, ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
