ಮೈಸೂರು: ಸತ್ಯಾಗ್ರಹಿ ಸೋನಂ ವಾಂಗ್ಚುಕ್ ಅವರನ್ನು ಸತ್ಯಾಗ್ರಹ ಸ್ಥಳದಿಂದ ದಬ್ಬಾಳಿಕೆ ಮಾಡಿ ಆಸ್ಪತ್ರೆಗೆ ಸಾಗಿಸಿರುವುದನ್ನು ಖಂಡಿಸಿ
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಆರ್ ಗೇಟ್ ವೃತ್ತದಲ್ಲಿ ಈಡುಗಾಯಿ ಹೊಡೆಯುವ ಮೂಲಕ ವಾಂಗ್ಚುಕ್ ಅವರಿಗೆ ಬೆಂಬಲ ವ್ಯಕ್ತಪಡಿಸಲಾಯಿತು.
ವಾಂಗ್ಚುಕ್ ಅವರನ್ನು ಸತ್ಯಾಗ್ರಹ ಸ್ಥಳದಿಂದ ಸರ್ವಾಧಿಕಾರಿ ಧೋರಣೆ ಅನುಸರಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಜನಿಸಿದ ನಾಡಿಗೆ ಅಪಮಾನ ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾರ್ಥಸಾರಥಿ, ತೇಜೇಶ್ ಲೋಕೇಶ್ ಗೌಡ, ನಾರಾಯಣ ಸ್ವಾಮಿ, ಸಿಂದುವಳ್ಳಿ ಶಿವಕುಮಾರ್, ಶಾಂತರಾಜೇ ಅರಸ್, ರಾಧಾಕೃಷ್ಣ, ಹನುಮಂತಯ್ಯ , ರವೀಶ್, ಶಿವರಾಜ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
