ಮೈಸೂರು: ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ನಾಳೆ ಭಾನುವಾರ ಸಂಜೆ 7 ಗಂಟೆಗೆ ಅಘಂ ಬ್ಯಾಂಡ್ ಖ್ಯಾತಿಯ ವಿದ್ವಾನ್ ಹರೀಶ್ ಶಿವರಾಮಕೃಷ್ಣನ್ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀ ಕೃಷ್ಣ ಟ್ರಸ್ಟ್, ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿ
ವತಿಯಿಂದ ಉಡುಪಿ ಶ್ರೀ ಕಾಣಿಯೂರು ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರ 35ನೇ ಚಾತುರ್ಮಾಸ್ಯ ಅಂಗವಾಗಿ ವಿದ್ವಾನ್ ಹರೀಶ್ ಶಿವರಾಮಕೃಷ್ಣನ್ ವರಿಂದ ಶಾಸ್ತ್ರೀಯ ಸಂಗೀತ ಏರ್ಪಡಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ಪ್ರಕಟಣೆಯ ಮೂಲಕ ಶ್ರೀ ಕೃಷ್ಣ ಟ್ರಸ್ಟ್ ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷ ರವಿಶಾಸ್ತ್ರಿ ಮನವಿ ಮಾಡಿದ್ದಾರೆ.
