ಮೈಸೂರು: ಮೈಸೂರಿನ ಸರಸ್ವತಿಪುರಂ ನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಉಡುಪಿ ಶ್ರೀ ಕಾಣಿಯೂರು ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರವರ 35ನೇ ಚಾತುರ್ಮಾಸ್ಯ ವ್ರತ ಸಮಾರಂಭ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಶಾಸಕ ಟಿ ಎಸ್ ಶ್ರೀವತ್ಸ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರುಗಳು ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಮುಖಂಡ ವಾಸುದೇವ್ ಭಟ್,ಶ್ರೀಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಶ್ರೀವತ್ಸ,
ಕಾರ್ಯದರ್ಶಿ ರಾಘವೇಂದ್ರ ರಾವ್, ಖಜಾಂಜಿ ಸುರೇಶ್ ರಾವ್, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತ್ರಿ,
ಪಿ ಎಸ್ ಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್,ಕೃಷ್ಣ ದಾಸ್ ಪುರಾಣಿ, ಸುಬ್ರಹ್ಮಣ್ಯ ತಂತ್ರಿ, ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಚೇತನ್, ಕಿಶೋರ್, ಸತೀಶ್ ಮತ್ತು ಸದಸ್ಯರು ಹಾಜರಿದ್ದರು.
