ಹುಣಸೂರು: ಹುಣಸೂರು 66/11 ಕೆವಿ ವಿವಿ ಕೇಂದ್ರದಲ್ಲಿ ಸಹಾಯಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್ ಎಸ್ ಅವರು ವಿದ್ಯುತ್ ಅವಘಡ ಸಂಭವಿಸಿ ಮೃತಪಟ್ಟಿದ್ದಾರೆ.
ನಿನ್ನೆ ಕೆಲಸದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಅವಘಡ ಸಂಭವಿಸಿ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ಮೈಸೂರಿನ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ.
ಮೃತರ ಅಂತ್ಯಸಂಸ್ಕಾರವನ್ನು ಅವರ ಸ್ವಗ್ರಾಮವಾದ ಹುಣಸೂರು ತಾಲ್ಲೂಕಿನ ಧರ್ಮಪುರ ಗ್ರಾಮದಲ್ಲಿ ನೆರವೇರಿಸಲಾಯಿತು.
ಆನಂದ್ ಅವರ ನಿಧನಕ್ಕೆ ಅಧಿಕಾರಿಗಳು ಮತ್ತು ಪಕ್ಷಾತೀತವಾಗಿ ಎಲ್ಲರೂ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಆನಂದ್ ಎಸ್ ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೆಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಎಲ್ಲಾ ವಿದ್ಯುತ್ ಕಚೇರಿಗಳಲ್ಲೂ ತೆಗೆದುಕೊಳ್ಳಬೇಕೆಂದು ಹುಣಸೂರು ಜನತೆಯ ಪರವಾಗಿ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಸರ್ಕಾರ ಮತ್ತು ಇಲಾಖೆಯನ್ನು ಆಗ್ರಹಿಸಿದ್ದಾರೆ.
