ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದಲ್ಲಿ ನಡೆದಿದೆ.
ಮುತ್ತಪ್ಪ ಶ್ರೀಶೈಲ ಮುಗಳಖೋಡ (46) ಮತ್ತು ರಾಜೇಶ್ವರಿ ಮುಗಳಖೋಡ (36) ಮೃತಪಟ್ಟ ದುರ್ದೈವಿ ದಂಪತಿ.
ಕಬ್ಬಿನ ಗದ್ದೆಯಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಈ ನತದೃಷ್ಟ ದಂಪತಿ ಮೃತಪಟ್ಟಿದ್ದಾರೆ
ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು, ಮೂಡಲಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
