ಕೆ.ಆರ್.ಪೇಟೆ: ಎಳನೀರು ಕೀಳುವಾಗ ವಿದ್ಯುತ್ ತಂತಿ ಸ್ಪರ್ಷಿಸಿ ಯುವಕ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಸಾಕ್ಷಿಬೀಡು ಗ್ರಾಮದಲ್ಲಿ ನಡೆದಿದೆ.
ಅಭಿಷೇಕ್ (28) ವಿದ್ಯುತ್ ತಂತಿಗೆ ಸ್ಪರ್ಷಿಸಿ ಮೃತಪಟ್ಟ ಯುವಕ.
ಎಳನೀರು ಕೀಳುವಾಗ ತೆಂಗಿನ ಮರದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಶಾಕ್ ಹೊಡೆದು ಅಭಿಷೇಕ್ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
