ಮೈಸೂರು : ಸಿಇಟಿಗೆ ಹಾಜರಾಗಿದ್ದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಯಿಂದ ಅಸಂಖ್ಯಾತ ಬ್ರಾಹ್ಮಣರ ಭಾವನೆಗೆ ಧಕ್ಕೆಯಾಗಿದೆ ಎಂದು
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನಿವಾರ ತೆಗೆಸಿದ ಪ್ರಕರಣವನ್ನು ಖಂಡಿಸುತ್ತೇವೆ ಎಂದು ಪತ್ರಿಕೆ ಹೇಳಿಕೆಯಲ್ಲಿ ವಿಕ್ರಮ್ ಅಯ್ಯಂಗಾರ್ ತಿಳಿಸಿದ್ದಾರೆ.
ಈ ಬಾರಿಯೂ ಸಿಇಟಿ ವೇಳೆ ಜನಿವಾರ ತೆಗೆಸಿದ ಪ್ರಕರಣದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಿ, ನೆಪಮಾತ್ರಕ್ಕೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದೆ. ಅವರನ್ನು ಒಂದೆರಡು ತಿಂಗಳು ಅಮಾನತಿನಲ್ಲಿ ಇಡಲಾಗುತ್ತದೆ. ಮತ್ತೆ ಅವರಿಗೆ ಬಡ್ತಿ ಸಿಕ್ಕರೂ ಸಿಗಬಹುದು. ಏಕೆಂದರೆ ಕಳೆದ ವರ್ಷವೂ ಇಂಥದೇ ಪ್ರಕರಣ ನಡೆದಿತ್ತು ಎಂದು ಹೇಳಿದ್ದಾರೆ.
ಜನಿವಾರ ಎಂದರೆ ಅದು ಮೂರು ಎಳೆಗಳ ಹತ್ತಿಯ ದಾರ ಮಾತ್ರ ಅಲ್ಲ. ಅದು ವಿಪ್ರರೂ ಸೇರಿದಂತೆ ಆರ್ಯ ವೈಶ್ಯರು, ಕ್ಷತ್ರಿಯ ಸಮುದಾಯದವರ ಆಚಾರ, ವಿಚಾರ, ಅನುಷ್ಠಾನದ ಸಂಕೇತ.
ಪರೀಕ್ಷಾ ಕೇಂದ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪ್ರಕರ ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕ್ರಮ ವಹಿಸುವ ಜೊತೆಗೆ ಇಂತಹ ಘಟನೆಗಳು ಮತ್ತೆ ಮರುಕಳಿಸಿದಂತೆ ನೋಡಿಕೊಳ್ಳಬೇಕು ಎಂದು ವಿಕ್ರಮ್ ಅಯ್ಯಂಗಾರ್ ಆಗ್ರಹಿಸಿದ್ದಾರೆ
