ವಿಪ್ರ ಸ್ವಉದ್ಯಮ ನೇರ ಸಾಲ ಯೋಜನೆ ಸೌಲಭ್ಯ ಪಡೆಯಿರಿ-ಎಚ್ ವಿ ರಾಜೀವ್ ಕರೆ

Spread the love

ಮೈಸೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ವತಿಯಿಂದ ವಿಪ್ರ ಸ್ವಉದ್ಯಮ ನೇರ ಸಾಲ ಯೋಜನೆಯಡಿ 2025-26ನೇ ಸಾಲಿನಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಎಂದು ಮೂಡ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ತಿಳಿಸಿದ್ದಾರೆ

ವಿಪ್ರ ಬಾಂಧವರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರು ಆದ ಎಚ್ ವಿ ರಾಜೀವ್ ಮನವಿ ಮಾಡಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ನೇರವಾಗಿ ಸಾಲ-ಸಹಾಯಧನ ಮಂಜೂರು ಮಾಡಲು ಉದ್ದೇಶಿಸಲಾಗಿದೆ‌ ಎಂದು ಅವರು ಹೇಳಿದ್ದಾರೆ.

ಹಸು ಸಾಕಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ವ ಉದ್ಯೋಗ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ 1 ಲಕ್ಷ ರೂ. ಹಾಗೂ ಗರಿಷ್ಠ 2 ಲಕ್ಷ ರೂ.ವರೆಗೆ ಆರ್ಥಿಕ ನೆರವು ದೊರೆಯಲಿದೆ. 1 ಲಕ್ಷ ರೂ.ಘಟಕ ವೆಚ್ಚಕ್ಕೆ 20 ಸಾವಿರ ರೂ.ಸಹಾಯಧನ ದೊರೆಯಲಿದೆ. ಉಳಿದ 80 ಸಾವಿರಕ್ಕೆ ಶೇ.4 ರಷ್ಟು ವಾರ್ಷಿಕ ಬಡ್ಡಿ ಆಗಲಿದೆ. ಅರ್ಜಿ ಸಲ್ಲಿಸಲು ಅ.31 ಸಂಜೆ 5 ರವರೆಗೆ ಕೊನೆಯ ದಿನವಾಗಿದೆ ಎಂದು ರಾಜೀವ್ ತಿಳಿಸಿದ್ದಾರೆ.