ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ 4 ಕಾರ್ಮಿಕರ ದುರ್ಮರಣ

Spread the love

ಮುಂಬೈ,ಮಾ.9: ಮುಂಬೈನಲ್ಲಿ ನೀರಿನ ಟ್ಯಾಂಕ್ ಸ್ವಚ್ಚಗೊಳಿಸಲು ಹೋದ ವೇಳೆ 4 ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.

ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾಗ ನಾಲ್ಕು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನಾಗಪಡ ಪ್ರದೇಶದ ಡಿಮ್ಟಿಮ್ಕರ್ ರಸ್ತೆಯಲ್ಲಿರುವ ಬಿಸ್ಮಿಲ್ಲಾ ಸ್ಪೇಸ್ ಕಟ್ಟಡದಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಸ್ಥಳದಲ್ಲಿದ್ದ ಇತರ ಕಾರ್ಮಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ,ತಕ್ಷಣ ಸರ್ಕಾರಿ ಜೆಜೆ ಆಸ್ಪತ್ರೆಗೆ ಉಸಿರುಗಟ್ಟಿದ ಕಾರ್ಮಿಕರನ್ನು ಕರೆದೊಯ್ಯಲಾಯಿತು.ಆದರೆ ವೈದ್ಯರು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೃಹನ್ಮುಂಬೈ ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು. ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.