ಮೈಸೂರು: ವಿಜಯನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಒಕ್ಕಲಿಗ ವುಮೆನ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಕಾಂತ್ ಮೂರ್ತಿ ಹಾಗೂ ಶಿಕ್ಷಕಿ ರಾಣಿ ಪದ್ಮಾವತಿ ಪಾಲ್ಗೊಂಡಿದ್ದರು.
ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಸಂಭ್ರಮ ದಿಂದ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.
