ಜಮೀನು ವಶ: ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ

Spread the love

ಚಾಮರಾಜನಗರ: ಅಂಬೇಡ್ಕರ್ ಭವನ ನಿರ್ಮಾಣ ಮಾಡುವುದಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಜಮೀನು ವಶ ಪಡಿಸಿಕೊಂಡ ಕಾರಣ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಡ್ಡಾಲತ್ತೂರಿನಲ್ಲಿ ಘಟನೆ ನಡೆದಿದ್ದು,ರಾಜಮ್ಮ (52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ರಾಜಮ್ಮಮ ಅವರಿಗೆ ಪಿತ್ರಾರ್ಜಿತವಾಗಿ 90 ಸೆಂಟ್ಸ್ ಭೂಮಿ ಬಂದಿತ್ತು.ಇದ್ದ ಚೂರುಪಾರು ಭೂಮಿಯಲ್ಲಿ ಕುಟುಂಬ ವ್ಯವಸಾಯ ಮಾಡಿಕೊಂಡಿತ್ತು.

ಕಳೆದ ವಾರ ಇದ್ದಕ್ಕಿದ್ದ ಹಾಗೆ ಬಂದ ಕಂದಾಯ ಇಲಾಖೆ ಅಧಿಕಾರಿಗಳು 20 ಸೆಂಟ್ಸ್ ಭೂಮಿ ವಶಪಡಿಸಿಕೊಂಡಿದ್ದರು. ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಇದರಿಂದ ಬೇಸರ ಪಟ್ಟುಕೊಂಡ ರಾಜಮ್ಮ ಶನುವಾರ ಮುಂಜಾನೆ ತಮ್ಮ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.