ಸುದರ್ಶನ್ ವಿದ್ಯಾ ಸಂಸ್ಥೆಯಲ್ಲಿ ಗಿಡ ನೆಟ್ಟು ವಿಶ್ವ ಪರಿಸರ ದಿನಾಚರಣೆ

Spread the love

ಮೈಸೂರು: ಮೈಸೂರಿನ ಹೂಟಗಳ್ಳಿ , ಕೆ ಹೆಚ್ ಬಿ ಕಾಲೋನಿಯಲ್ಲಿರುವ
ಸುದರ್ಶನ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಅಮೂಲ್ಯ ಗಿಡಗಳನ್ನು ನೆಟ್ಟು ನೀರು ಹಾಕುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಪರಿಸರ ಕುರಿತು ಶಿಕ್ಷಕರು ಜಾಗೃತಿ ಮೂಡಿಸಿದರು.

ಗಿಡ,ಮರಗಳನ್ನು ಬೆಳೆಸಿ ಪೋಷಿಸಿದರೆ ಪರಿಸರವನ್ನು ಉಳಿಸಬಹುದು ಎಂದು ಶಿಕ್ಷಕರು ತಿಳುವಳಿಕೆ ಮೂಡಿಸಿದರು.

ಈ ವೇಳೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.